ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್–ರೇಂಜರ್ಸ್ ಘಟಕಗಳ ಸಂಯುಕ್ತ ಸಮಾರೋಪ ಸಮಾರಂಭವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜೆ ಕಾರ್ಕಳ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ಅತಿಥಿ ಶ್ರೀಮತಿ ಯಶೋಧಾ ಹೆಗ್ಡೆ ಸಹ ಶಿಕ್ಷಕಿ ಪಿ ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಬ್ರಿ ಇವರು, ಯುವ ರೆಡ್ ಕ್ರಾಸ್ ಮತ್ತು ರೋವರ್ಸ್–ರೇಂಜರ್ಸ್ ಘಟಕಗಳು ವಿದ್ಯಾರ್ಥಿಗಳಲ್ಲಿ ಮಾನವೀಯತೆ, ಸಾಮಾಜಿಕ ಹೊಣೆಗಾರಿಕೆ ಮತ್ತು ಸೇವಾಭಾವ ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸುತ್ತವೆ ಎಂದು ಹೇಳಿದರು.
ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ। ದೇವಿದಾಸ್ ಎಸ್. ನಾಯಕ್ ಅವರು, ವಿದ್ಯಾರ್ಥಿಗಳಲ್ಲಿರುವ ಶಕ್ತಿ, ಶಿಸ್ತು, ಸೇವಾಭಾವ ಹಾಗೂ ದೇಶಪ್ರೇಮವನ್ನು ಉತ್ತೇಜಿಸುವಲ್ಲಿ ಇಂತಹ ಘಟಕಗಳು ಸೇತುವೆಯಂತೆ ಕಾರ್ಯನಿರ್ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು. ರೆಡ್ ಕ್ರಾಸ್ ಶಿಬಿರಾಧಿಕಾರಿ ಕು .ದೀಪಿಕಾ, ರೇಂಜರ್ಸ್ ಹಾಗೂ ರೋವರ್ಸ್ ನ ಶಿಬಿರಾಧಿಕಾರಿಗಳಾದ ಸ್ಟಾಲಿನ್ ಡಿಸೋಜಾ ಹಾಗೂ ಕು. ಅಕ್ಷತಾ ನಾಯಕ್, ಎನ್ ಎಸ್ ಎಸ್ ನ ಶಿಬಿರಾಧಿಕಾರಿಯಾದ ಸನತ್ ಕೋಟ್ಯಾನ್ ಉಪಸ್ಥಿತರಿದ್ದರು .ಶ್ರೇಷ್ಠ ಸ್ವಾಗತಿಸಿ,ರಕ್ಷಿತಾ ಅತಿಥಿ ಪರಿಚಯ ನೀಡಿ ,ಭಾರ್ಗವ ಭಟ್ ಧನ್ಯವಾದ ಸಮರ್ಪಿಸಿ , ನಿಕ್ಷಿತಾ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




