ಸುರತ್ಕಲ್: ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಮಧ್ಯ ಸುರತ್ಕಲ್‌ನಲ್ಲಿ ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಮಾತನಾಡಿ, ನಮ್ಮ ಸಂವಿಧಾನದ ಉದಾತ್ತ ಮೌಲ್ಯಗಳನ್ನು ಅರಿತು ಅನುಷ್ಠಾನಗೊಳಿಸುವ ಸಂಕಲ್ಪ ಮಾಡ ಬೇಕು ಎಂದರು.
ಸಮಾಜಶಾಸ್ತ್ರ ಶಿಕ್ಷಕಿ ಪ್ರಭಾವತಿ ರಾಷ್ಟ್ರೀಯ ಸಂವಿಧಾನ ದಿನದ ಮಹತ್ವವನ್ನು ತಿಳಿಸಿದರು. ಚೇಲಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಮತ್ತು ಸಾಹಿತಿ ರಾಜೇಂದ್ರ ಬಿ ಶೆಟ್ಟಿ ಶುಭ ಹಾರೈಸಿದರು.
ಸಂವಿಧಾನ ಪೀಠಿಕೆಯನ್ನು ವಾಚಿಸಲಾಯಿತು. ಶಿಕ್ಷಕಿ ಸುನಂದ ಸ್ವಾಗತಿಸಿದರು. ಶಾಲಾ ವಾರ್ಡನ್ ನಿಂಗರಾಜು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



