ಪುತ್ತೂರು: ಕಳೆದ ಡಿಸೆಂಬರ್ 9 ಮತ್ತು 10 ರಂದು ಬೆಳ್ತಂಗಡಿಯ ಸರಕಾರಿ ಪದವಿ ಕಾಲೇಜಿನಲ್ಲಿ ನಡೆದಂತಹ 2025-26 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟದಲ್ಲಿ, ವಿವೇಕಾನಂದ ಕಾಲೇಜು ಪುತ್ತೂರು ಇಲ್ಲಿಯ ಹುಡುಗರ ಮತ್ತು ಹುಡುಗಿಯರ ತಂಡಗಳು ನಾಲ್ಕನೇ ಸ್ಥಾನವನ್ನು ಪಡೆಯುವುದರ ಮೂಲಕ ಮುಂದಿನ ವರ್ಷ ನೇರವಾಗಿ ಕ್ವಾರ್ಟರ್ ಫೈನಲ್ ಆಡುವ ಅರ್ಹತೆ ಗಳಿಸಿಕೊಂಡಿದೆ. ದ್ವಿತೀಯ ಬಿಎ ವಿದ್ಯಾರ್ಥಿನಿ ದಿವ್ಯ ಇವರು ಉತ್ತಮ ಡಾಡ್ಜರ್ ಪ್ರಶಸ್ತಿ ಹಾಗೂ ಪ್ರಥಮ ಬಿಕಾಂ ವಿದ್ಯಾರ್ಥಿ ನಿಶಾಂತ್ ಇವರು ಉತ್ತಮ ಚೇಸರ್ ಪ್ರಶಸ್ತಿಯನ್ನು ಪಡೆದರು.
ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಉಪನ್ಯಾಸಕೇತರರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್ ವಿ.ಎಸ್ ಇವರ ಮಾರ್ಗದರ್ಶನದಲ್ಲಿ ಡಾ.ಜ್ಯೋತಿ ಕುಮಾರಿ ಹಾಗೂ ಯತೀಶ್ ಕುಮಾರ್ ಬಾರ್ತಿಕುಮೇರು ತರಬೇತಿ ನೀಡಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

