'ಗಣಿತ ಬಹಳ ಸುಲಭ' ಕಾರ್ಯಾಗಾರ

Upayuktha
0


ಸುರತ್ಕಲ್‌: ಕಠಿಣವೆಂದು ಬಿಂಬಿತವಾಗುವ ಗಣಿತ ಬಹಳ ಸುಲಭವೆಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಡಬೇಕು. ಸರಳವಾದ ಗಣಿತ ಸೂತ್ರಗಳ ಮೂಲಕ ಗಣಿತದ ಕುರಿತು ಆಸಕ್ತಿ ಮೂಡಿಸಲು ಸಾಧ್ಯ ಎಂದು 'ಗಣಿತ ಬಹಳ ಸುಲಭ' ಕೃತಿಯ ಲೇಖಕ ಹಾಗೂ ನಿವೃತ್ತ ಇಂಜಿನಿಯರ್ ರಾಜೇಂದ್ರ ಬಿ. ಶೆಟ್ಟಿ, ಬೆಂಗಳೂರು ನುಡಿದರು. ಅವರು ಸಿಂಗಾರ ಸುರತ್ಕಲ್ ಆಶ್ರಯದಲ್ಲಿ ಬೈಕಂಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ 'ಗಣಿತ ಬಹಳ ಸುಲಭ' ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.


ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಪ್ರತಿಭೆ ಇದ್ದು ಅದನ್ನು ಗುರುತಿಸುವ ಕಾರ್ಯ ನಡೆಯಬೇಕು. ಕಲಿಯುವ ವಿಷಯದಲ್ಲಿ ಅಕ್ಕರೆಯನ್ನು ಮೂಡಿಸಿದಾಗ  ಇನ್ನಷ್ಟು ಕಲಿಯಲು ಪ್ರೇರಣೆ ದೊರಯುತ್ತದೆ ಎಂದರು.  


ವಿವಿಧ ಕ್ರಮದ ಗಣಿತ ಸಮಸ್ಯೆಗಳನ್ನು ಸುಲಭವಾಗಿ ಬಿಡಿಸುವ ಕಲಿಕಾ ತಂತ್ರಗಳನ್ನು ತಿಳಿಸಿಕೊಟ್ಟರು.


ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಪ್ರೊ. ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸೃಜನಾತ್ಮಕವಾಗಿ ತಿಳಿಸಿದಾಗ ವಿಷಯದ ಕುರಿತು ಆಪ್ತತೆ ಬೆಳೆಯುತ್ತದೆ. ಕನ್ನಡ ಮಾಧ್ಯಮ ಶಾಲೆಗಳಿಗೆ ಆದ್ಯತೆ ನೀಡಿ ಗಣಿತ ಬಹಳ ಸುಲಭ ಪರಿಕಲ್ಪನೆಯ ಕಾರ್ಯಕ್ರಮವನ್ನು ವಿವಿಧ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಸ್ಪಂದಿಸಿ ಗಣಿತದ ಕುರಿತು ಆಸಕ್ತಿ ಮೂಡಿಸಿಕೊಳ್ಳುತ್ತಿದ್ದಾರೆ ಎಂದರು.


ಶಾಲೆಯ ಮುಖ್ಯ ಶಿಕ್ಷಕ ಅಜ್ಜಯ್ಯ ಸ್ವಾಗತಿಸಿದರು. ಶಾಲಾ  ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಗಣಿತದ ಸಮಸ್ಯೆಗಳನ್ನು ಬಿಡಿಸಿ ಸರಿ ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ಪುಸ್ತಕ ಬಹುಮಾನ ನೀಡಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top