ಇಂದು ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
ಬಂಟ್ವಾಳ: ಪುದು, ಕೊಡ್ಮಾಣ್, ಕಳ್ಳಿಗೆ, ತುಂದೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಮೂರು ವರ್ಷಗಳಿಗೊಮ್ಮೆ ಪ್ರತಿ ಮನೆ ಮನಗಳಲ್ಲಿ ರಾಮ ನಾಮದ ಅನುರಣನೆಯೊಂದಿಗೆ ಭಕ್ತಿಯ ಮೂಲಕ ಶಕ್ತಿಯ ಜಾಗೃತಿಗಾಗಿ ನಡೆಯುವ ಶ್ರೀ ರಾಮ ನಾಮ ತಾರಕ ಜಪ ಯಜ್ಞವು ಈ ಬಾರಿ ತಾಲೂಕಿನ ಪುದು- ಕಳ್ಳಿಗೆ ಗ್ರಾಮದ ನೆತ್ತರಕೆರೆಯಲ್ಲಿ ಶ್ರದ್ದಾ ಭಕ್ತಿಯೊಂದಿಗೆ ನಡೆಯಲಿದೆ ಎಂದು ಶ್ರೀ ರಾಮ ನಾಮ ತಾರಕ ಜಪ ಯಜ್ಞ ಸಮಿತಿಯ ಸಂಯೋಜಕ ತೇವು ತಾರಾನಾಥ ಕೊಟ್ಟಾರಿ ತಿಳಿಸಿದರು.
ಅವರು ಡಿ. 18ರಂದು ನೆತ್ತರಕೆರೆಯಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಶನಿವಾರ ಸಂಜೆ 7ರಿಂದ ಪಂಚಗವ್ಯಾದಿ ಮಂಟಪ ಶುದ್ಧಿ, ಅರಣಿ ಮಥನ, ಅಗ್ನಿ ಜನನ ವೈದಿಕ ಕಾರ್ಯಕ್ರಮ ನಡೆಯಲಿದ್ದು, ಭಾನುವಾರ ಬೆಳಿಗ್ಗೆ ಗಂಟೆ 6-00ರಿಂದ ಗಣಪತಿ ಹೋಮ, ಧ್ವಜಾರೋಹಣ, ಗೋಪೂಜೆ ನಡೆದು, ಶ್ರೀ ರಾಮ ನಾಮ ತಾರಕ ಜಪ ಯಜ್ಞ ಪ್ರಾರಂಭಗೊಂಡು 11ಕ್ಕೆ ಪೂರ್ಣಾಹುತಿಯಾಗಿ ಮಂಗಳಾರತಿ ಬಳಿಕ ನಡೆಯುವ ಸುಧರ್ಮ ಸಭೆಯಲ್ಲಿ ಅಖಿಲ ಭಾರತ ಗ್ರಾಮ ವಿಕಾಸ ಟೋಳಿ ಸದಸ್ಯ ರಮೇಶ್ ಇವರು ದಿಕ್ಸುಚಿ ಭಾಷಣ ಮಾಡಲಿದ್ದಾರೆ ನಂತರ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.
ಸಂಯೋಜಕ ದಾಮೋದರ ನೆತ್ತರಕೆರೆ ಮಾತನಾಡಿ ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಯಶಸ್ವಿಗಾಗಿ ಪೂರ್ವಭಾವಿಯಾಗಿ 6 ಗ್ರಾಮಗಳ 60ಕ್ಕೂ ಅಧಿಕ ಕಡೆಗಳಲ್ಲಿ ಕಾರ್ನರ್ ಬೈಠಕ್ ಹಾಗೂ ಗ್ರಾಮದ ಪ್ರತಿ ಹಿಂದೂ ಮನೆಗಳಲ್ಲಿ ಪರಿಸರದ ರಾಮ ಭಕ್ತರು ಒಟ್ಟು ಸೇರಿ ಸಾಮೂಹಿಕ ಶ್ರೀರಾಮ ತಾರಕ ಮಂತ್ರ ಪಠಣೆ ನಡೆದಿದೆ. ಕಾರ್ಯಕ್ರಮದ ಧ್ವಜಾರೋಹಣವನ್ನು ಡಾ ಪ್ರಭಾಕರ ಭಟ್ ಕಲ್ಲಡ್ಕ ಮಾಡಲಿದ್ದು, ಡಿ.19ರಂದು ಶುಕ್ರವಾರ ಅಪರಾಹ್ನ ಗಂಟೆ 4-00ಕ್ಕೆ ಫರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯ ಮೂಲಕ ನೆತ್ತರಕೆರೆಗೆ ತಲುಪಲಿದೆ ಎಂದರು.
ಮಂಗಳೂರು ವಿಭಾಗ ಗ್ರಾಮ ವಿಕಾಸ ಸಂಯೋಜಕರ ಜಿತೇಂದ್ರ ಪ್ರತಾಪನಗರ ಮಾತನಾಡಿ, ವಿಕಸಿತ ಭಾರತದ ಹಿತದೃಷ್ಟಿಯಿಂದ ಪ್ರತಿ ವ್ಯಕ್ತಿ, ಗ್ರಾಮ,ಕುಟುಂಬ ಸಾಮರಸ್ಯ ಮನೋಭಾವನೆ ಹಾಗೂ ಸಂಸ್ಕಾರಯುತ ವಾಗಬೇಕು, ಕುಟುಂಬ ಪದ್ಧತಿ ಮುಂದಿನ ಪೀಳಿಗೆಗೂ ತಲುಪಬೇಕೆಂಬ ಉದ್ದೇಶದಿಂದ ರಾಮ ನಾಮ ತಾರಕ ಜಪ ಯಜ್ಞ ಆಯೋಜಿಸಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಶ್ರೀ ರಾಮ ನಾಮ ತಾರಕ ಜಪ ಯಜ್ಞ ಸಮಿತಿಯ ಪ್ರ ಕಾರ್ಯದರ್ಶಿ ಬಿನುತ್ ಕುಮಾರ್ ಅಬ್ಬೆಟ್ಟು, ಕೋಶಾಧಿಕಾರಿ ಕಿಶೋರ್ ಕುಮಾರ್, ಮಾರ್ಗದರ್ಶಕ ಜಯರಾಮ ಶೆಟ್ಟಿ ಅಬ್ಬೆಟ್ಟು, ನವೋದಯ ಮಿತ್ರ ಕಲಾ ವೃಂದದ ಅಧ್ಯಕ್ಷ ಜಗದೀಶ ಎನ್, ಸಲಹೆಗಾರ ಭಾಸ್ಕರ ಕುಲಾಲ್ ನೆತ್ತರಕೆರೆ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


