ಬೆಂಗಳೂರು: ಆಧ್ಯಾತ್ಮಿಕ ಕ್ಷೇತ್ರದ ಅನನ್ಯ ಸೇವೆಗಾಗಿ ಖ್ಯಾತ ವಾಗ್ಮಿ ಹಾಗೂ ಚಿಂತಕ ಶ್ರೀ ದುಷ್ಯಂತ್ ಶ್ರೀಧರ್ ಅವರಿಗೆ ಪಾಂಚಜನ್ಯ ಪ್ರತಿಷ್ಠಾನದ 2025ನೇ ಸಾಲಿನ ಪ್ರತಿಷ್ಠಿತ ‘ಪಾಂಚಜನ್ಯ ಪುರಸ್ಕಾರ’ ಪ್ರದಾನ ಮಾಡಲಾಗುವುದು.
ಪಾಂಚಜನ್ಯ ಪ್ರತಿಷ್ಠಾನದ ಹದಿಮೂರನೇ ವಾರ್ಷಿಕೋತ್ಸವದ ಅಂಗವಾಗಿ ಈ ಪುರಸ್ಕಾರ ಪ್ರದಾನ ಸಮಾರಂಭವು ಡಿಸೆಂಬರ್ 28ರಂದು ಶನಿವಾರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಜಯನಗರ 4ನೇ ಬ್ಲಾಕ್‌ನ ಯುವಪಥ, ವಿವೇಕ ಆಡಿಟೋರಿಯಂನಲ್ಲಿ ನಡೆಯಲಿದೆ.
ಅಧ್ಯಾತ್ಮ ಕ್ಷೇತ್ರದಲ್ಲಿ ಶ್ರೀ ದುಷ್ಯಂತ್ ಶ್ರೀಧರ್ ಅವರು ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಸಾಲಿನ ಪಾಂಚಜನ್ಯ ಪುರಸ್ಕಾರ ನೀಡಲಾಗುತ್ತಿದೆ. ಈ ಪುರಸ್ಕಾರವು ಅಭಿನಂದನಾ ಪತ್ರ, ಸ್ಮರಣಿಕೆ, ಫಲ–ತಾಂಬೂಲ ಹಾಗೂ ರೂ.1,00,000 ನಗದು ಬಹುಮಾನವನ್ನು ಒಳಗೊಂಡಿದೆ.
ಸಮಾರಂಭದಲ್ಲಿ ಕರ್ನಾಟಕದ ಮಾಜಿ ಅಡ್ವೋಕೇಟ್ ಜನರಲ್ ಶ್ರೀ ಅಶೋಕ್ ಹಾರನಹಳ್ಳಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪುರಸ್ಕಾರ ಪ್ರದಾನ ಮಾಡುವರು. ಪಾಂಚಜನ್ಯ ಪ್ರತಿಷ್ಠಾನದ ಟ್ರಸ್ಟಿಗಳಾದ ಎಸ್.ವಿ. ಸುಬ್ರಹ್ಮಣ್ಯ, ಅನಂತ ವೇದಗರ್ಭಂ ಹಾಗೂ ವೆಂಕಟೇಶ ಆರ್. ವೇದಾಂತಿ ಉಪಸ್ಥಿತರಿರುವರು.
ಪಾಂಚಜನ್ಯ ಪ್ರತಿಷ್ಠಾನವು ಕಳೆದ ಹನ್ನೆರಡು ವರ್ಷಗಳಿಂದ ಅಕ್ಷರ, ಆರೋಗ್ಯ ಹಾಗೂ ಅಧ್ಯಾತ್ಮ ಕ್ಷೇತ್ರಗಳಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಪುರಸ್ಕರಿಸುವ ಪರಂಪರೆಯನ್ನು ಬೆಳೆಸಿಕೊಂಡಿದೆ.
ಈ ಕುರಿತು ಪ್ರತಿಷ್ಠಾನದ ಸಂಸ್ಥಾಪಕ ಗೌರವ ಕಾರ್ಯದರ್ಶಿ ಶ್ರೀ ಮುರಳಿ ಎಸ್. ಕಾಕೋಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

