ಬಳ್ಳಾರಿ: ಬಳ್ಳಾರಿ ನಗರದ ಯುವ ಬ್ಯಾಡ್ಮಿಂಟನ್ ಪ್ರತಿಭೆಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಇವರ ಕ್ರೀಡಾ ಸಾಧನೆ ರಾಷ್ಟ್ರದ ಗಮನ ಸೆಳೆಯುವಂತಾಗಲಿ ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಅವರು ಶುಭ ಹಾರೈಸಿದ್ದಾರೆ.
ರಾಜ್ಯಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಬಳ್ಳಾರಿ ನಗರದ ಯುವ ಪ್ರತಿಭೆಗಳು ಮತ್ತು ವಿದ್ಯಾರ್ಥಿನಿಯರಾದ ಕೆ. ಹಾಶಿಕಾ ಸಾಯಿ, ಟಿ. ಸಮುದ್ವಿತ ಮತ್ತು ಎಸ್. ಮನೋಜ್ಞಾ ಸಾಯಿ ಅವರು, ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮಹತ್ತರ ಸಾಧನೆ ಮಾಡಿರುವ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯು ಇವರನ್ನು ಮಂಗಳವಾರ ಅಭಿನಂದಿಸಿ, ಗೌರವಿಸಿ ಪ್ರೋತ್ಸಾಹಿಸಿತು.
ಬಳ್ಳಾರಿ ಕಲೆ, ಕ್ರೀಡೆ, ಸಾಹಿತ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಖ್ಯಾತಿಯನ್ನು ಪಡೆದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಾದ ಕೆ. ಹಾಶಿಕಾ ಸಾಯಿ, ಟಿ. ಸಮುದ್ವಿತ ಮತ್ತು ಎಸ್. ಮನೋಜ್ಞಾ ಸಾಯಿ ಅವರ ಸಾಧನೆಯು ಗಮನಾರ್ಹವಾದದ್ದು. ಈ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಅಭಿನಂದಿಸುತ್ತಿದೆ ಎಂದರು.
ಅಭಿನಂದಿತ ವಿದ್ಯಾರ್ಥಿನಿಯರಾದ ಕೆ. ಹಾಶಿಕಾ ಸಾಯಿ, ಟಿ. ಸಮುದ್ವಿತ ಮತ್ತು ಎಸ್. ಮನೋಜ್ಞಾ ಸಾಯಿ ಅವರು, ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಅತ್ಯಂತ ಕೆಳ ಹಂತದಿಂದ ನಿರಂತರ ಸಾಧನೆಗಳ ಮೆಟ್ಟಿಲುಗಳನ್ನು ಹತ್ತುತ್ತಿರುವ ನಮಗೆ, ಬಿಡಿಸಿಸಿ&ಐ ಅಭಿನಂದಿಸುತ್ತಿರುವುದಕ್ಕೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ನಿಮ್ಮೆಲ್ಲರ ಶುಭ ಹಾರೈಕೆ ಮತ್ತು ಪ್ರೋತ್ಸಾಹಗಳ ಕಾರಣ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು, ಯುವ ಕ್ರೀಡಾಪಟುಗಳು ವಿದ್ಯಾರ್ಥಿ ಜೀವನದಲ್ಲಿಯೇ ಜಿಲ್ಲಾ ಮತ್ತು ರಾಜ್ಯ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ವಿಶೇಷ ಸಾಧನೆಗಳನ್ನು ಮಾಡಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯು ಅವರ ಸಾಧನೆಯನ್ನು ಅಭಿನಂದಿಸಿ, ಭವಿಷ್ಯದ ಸ್ಪರ್ಧೆಗಳಲ್ಲಿ ಸಾಧನೆ ಮಾಡಲು ಪ್ರೋತ್ಸಾಹಿಸುತ್ತಿದೆ ಎಂದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯ ವೇಣುಗೋಪಾಲ್ ಗುಪ್ತ ಅವರು ಕ್ರೀಡಾಪಟುಗಳನ್ನು ಸಭೆಗೆ ಪರಿಚಯಿಸಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ, ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೊಂತ ಗಿರಿಧರ, ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೆಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಖಜಾಂಚಿಗಳಾದ ನಾಗಳ್ಳಿ ರಮೇಶ್, ಮಾಜಿ ಅಧ್ಯಕ್ಷರುಗಳಾದ ಸಿ. ಶ್ರೀನಿವಾಸರಾವ್, ಬಿ. ಮಹಾರುದ್ರಗೌಡ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು, ಕ್ರೀಡಾಪಟುಗಳ ಪೋಷಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







