ಉಜಿರೆ: ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರು ಉಡುಪಿಯ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆಸಿದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬಹುಮಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪ್ರಥಮ ಪಿಯುಸಿ ವಿಭಾಗದ ಪೆನ್ಸಿಲ್ ಸ್ಕೆಚ್ ಸ್ಪರ್ಧೆಯಲ್ಲಿ ಸಾತ್ವಿಕ್ ಭಟ್ ಪ್ರಥಮ ಸ್ಥಾನ, ದ್ವಿತೀಯ ಪಿಯುಸಿ ವಿಭಾಗದ ಪೆನ್ಸಿಲ್ ಸ್ಕೆಚ್ ಸ್ಪರ್ಧೆಯಲ್ಲಿ ಪ್ರೀತಮ್ ಶೆಟ್ಟಿಗಾರ್ ತೃತೀಯ ಸ್ಥಾನ, ಏಕ ಪಾತ್ರಾಭಿನಯ ಸ್ಪರ್ಧೆಯಲ್ಲಿ ಹಂಸಿನಿ ಭಿಡೆ ತೃತೀಯ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್, ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಉಪ ಪ್ರಾಂಶುಪಾಲ ರಾಜೇಶ್ ಬಿ, ಸಾಂಸ್ಕೃತಿಕ ಸಮಿತಿಯ ಸಂಯೋಜಕ ನಾಗರಾಜ್ ಬಿ. ಅಭಿನಂದಿಸಿದ್ದಾರೆ. ಉಪನ್ಯಾಸಕಿಯರಾದ ಶ್ರೀಮತಿ ಅಮೃತಾ ಎನ್, ಶ್ರೀಮತಿ ಸುಚೇತಾ, ಶ್ರೀಮತಿ ಅಂಬಿಕಾ ಹಾಗೂ ಸಾಂಸ್ಕೃತಿಕ ಸಮಿತಿಯ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

