ಉಜಿರೆ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕೊಯ್ಯೂರು ಇಲ್ಲಿ ಡಿಸೆಂಬರ್ 28 ರಂದು ನಡೆದ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿದ್ಯಾರ್ಥಿನಿ ಸನ್ನಿಧಿ ಕೆ ಎಸ್ ಇವರ ಬರಹವೆಂಬ ಆಪತ್ಭಾಂಧವ, ಹಾಗೂ ದ್ವಿತೀಯ ಕಲಾ ವಿದ್ಯಾರ್ಥಿನಿ ಶ್ರೀಪೂರ್ಣ ಗಬ್ಲಡ್ಕ ಇವರು ಬರೆದ ಗೆಳೆಯಾ… ಸಮಯ ಕಳೆದಿದೆ ಎಂಬ ಕವಿತೆಗಳನ್ನು ಕವಿಗೋಷ್ಠಿಯಲ್ಲಿ ವಾಚಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ, ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.


