ಅಂಬಿಕಾ ವಿದ್ಯಾಲಯದಲ್ಲಿ "ವಂದೇ ಮಾತರಂ" ರಾಷ್ಟ್ರಗಾನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Upayuktha
0


ಪುತ್ತೂರು: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ವಂದೇ ಮಾತರಂ ರಾಷ್ಟ್ರ ಗಾನದ 150ನೇ ವರ್ಷಾಚರಣೆ ಪ್ರಯುಕ್ತ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ಶಂಕರ ಸಭಾಭವನದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಗುಂಪು ಗಾಯನ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. 


ವಯಕ್ತಿಕ ವಿಭಾಗ: 

ವೈಯಕ್ತಿಕ ವಿಭಾಗದಲ್ಲಿ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ಸನ್ಮಯ್ ಎನ್. ಪ್ರಥಮ, ಜಾಲ್ಸೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಖುಷಿ ಡಿ. ದ್ವಿತೀಯ ಹಾಗೂ ಉಪ್ಪಳಿಗೆ, ಇರ್ದೆಯ ಸರಕಾರಿ ಪ್ರೌಢ ಶಾಲೆಯ ಜನನಿ  ತೃತೀಯ ಸ್ಥಾನ ಗಳಿಸಿದರು. 


ಗುಂಪು ವಿಭಾಗ: 

ಗುಂಪು ಗಾಯನ ವಿಭಾಗದಲ್ಲಿ ಜಾಲ್ಸೂರು ವಿವೇಕಾನಂದ ಪ್ರೌಢ ಶಾಲೆಯ ಅನಘ ಯಚ್.ಎಸ್. ಹಾಗೂ ತಂಡ ಪ್ರಥಮ ಸ್ಥಾನ, ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಸಿಂಚನ ಭಟ್ ಹಾಗೂ ತಂಡ ದ್ವಿತೀಯ, ಪುತ್ತೂರು ನೆಹರೂ ನಗರದ ಸುದಾನ ಪ್ರೌಢಶಾಲೆಯ ಅನನ್ಯಾ ಮತ್ತು ತಂಡ ತೃತೀಯ ಸ್ಥಾನ ಪಡೆದರು. 


ಪ್ರಥಮ ಸ್ಥಾನ ವಿಜೇತರಿಗೆ ರೂ. 3 ಸಾವಿರ, ದ್ವಿತೀಯ ಸ್ಥಾನ ವಿಜೇತರಿಗೆ ರೂ. 2 ಸಾವಿರ ಹಾಗೂ ಪ್ರಥಮ ಸ್ಥಾನ ವಿಜೇತರಿಗೆ ರೂ. 1 ಸಾವಿರ ಫಲಕ, ಪದಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ಸುರೇಶ್ ಶೆಟ್ಟಿ, ಪ್ರಸನ್ನ ಭಟ್  ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು.


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ., ಬಪ್ಪಳಿಗೆ ಅಂಬಿಕಾ ವಸತಿಯುತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್., ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಜಯಂತಿ ಹೊನ್ನಮ್ಮ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕನ್ನಡ ಉಪನ್ಯಾಸಕ ಸತೀಶ್ ಇರ್ದೆ ಕಾರ್ಯಕ್ರಮ ನಿರೂಪಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top