ರಾಜ್ಯದಲ್ಲಿ ಹಿಂದೂ ಧರ್ಮದ ಮೇಲೆ ನಡೆಯುತ್ತಿರುವ ಆಘಾತಗಳ ಕುರಿತು ಜನಜಾಗೃತಿ
ತುಮಕೂರು: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ತುಮಕೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಧರ್ಮ ಜಾಗೃತಿ ಪ್ರವಚನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಿಂದೂ ಧರ್ಮದ ಮೇಲೆ ದೇಶ–ವಿದೇಶಗಳಲ್ಲಿ ನಡೆಯುತ್ತಿರುವ ಆಘಾತಗಳು, ದೌರ್ಜನ್ಯಗಳು ಹಾಗೂ ಅದರ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು, 150ಕ್ಕೂ ಅಧಿಕ ಹಿಂದೂ ಬಾಂಧವರು ಉಪಸ್ಥಿತರಿದ್ದು ಇದರ ಲಾಭ ಪಡೆದುಕೊಂಡರು.
ಪ್ರವಚನದಲ್ಲಿ ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರರಾದ ಮೋಹನ ಗೌಡ ಇವರು ಮಾತನಾಡುತ್ತಾ, ಬಾಂಗ್ಲಾದೇಶದ ಮೈಮನ್‌ಸಿಂಗ್ ಪ್ರದೇಶದಲ್ಲಿ ನಡೆದ ಅಮಾನವೀಯ ಘಟನೆಯನ್ನು ಉಲ್ಲೇಖಿಸಿ, ಹಿಂದೂ ಸಹೋದರ ದೀಪು ಚಂದ್ರ ದಾಸ್ ಅವರನ್ನು ಮತೀಯ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿಯೇ ಬೆಂಕಿಗೆ ಆಹುತಿಗೊಳಿಸಿದ ಘಟನೆ ಮಾನವತೆಯೇ ತಲೆತಗ್ಗಿಸುವಂತದ್ದು ಎಂದರು.
ಇದೊಂದೇ ಘಟನೆಯಲ್ಲ; ಬಾಂಗ್ಲಾದೇಶದಲ್ಲಿ ಹಿಂದೂ ಮನೆಗಳು, ಅಂಗಡಿಗಳು ಹಾಗೂ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿಗಳು ನಡೆಯುತ್ತಿವೆ, 1941ರಲ್ಲಿ ಬಾಂಗ್ಲಾದೇಶದಲ್ಲಿ 28% ಇದ್ದ ಹಿಂದೂ ಜನಸಂಖ್ಯೆ ಇಂದು ಕೇವಲ 7.8% ಕ್ಕೆ ಕುಸಿದಿದೆ. ಇದು ಯಾದೃಚ್ಛಿಕವಲ್ಲ; ಇದು ಸ್ಪಷ್ಟವಾದ ಹಿಂದೂ ನಿರ್ಮೂಲನೆಯ ಪ್ರಕ್ರಿಯೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಬಾಂಗ್ಲಾದೇಶದ ಮೇಲೆ ಆರ್ಥಿಕ, ವ್ಯಾಪಾರಿಕ ಮತ್ತು ರಾಜಕೀಯ ನಿರ್ಬಂಧಗಳನ್ನು ವಿಧಿಸಬೇಕು, ಉಗ್ರ ಹಾಗೂ ಮತೀಯ ಗುಂಪುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಂಯುಕ್ತ ರಾಷ್ಟ್ರಗಳು ಹಾಗೂ ಮಾನವ ಹಕ್ಕುಗಳ ಆಯೋಗದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಫ್ಯಾಕ್ಟ್–ಫೈಂಡಿಂಗ್ ಮಿಷನ್ ಕಳುಹಿಸಬೇಕು` ಎಂದು ಅವರು ಆಗ್ರಹಿಸಿದರು.
ಅದೇ ವೇಳೆ ಅವರು, ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿರುವ “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ವಿಧೇಯಕ, 2025” ಕುರಿತು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವಿಧೇಯಕವು ಅಸ್ಪಷ್ಟ, ಅತಿವಿಸ್ತೃತ ಹಾಗೂ ಸಂವಿಧಾನ ವಿರೋಧಿ ಆಗಿದ್ದು, ವಾಕ್ ಸ್ವಾತಂತ್ರ್ಯ (ಸಂವಿಧಾನದ ವಿಧಿ 19(1)(a)) ಮತ್ತು ಧಾರ್ಮಿಕ ಸ್ವಾತಂತ್ರ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತದೆ ಎಂದು ಹೇಳಿದರು.
ಇದು ಹಿಂದೂಗಳ ಧ್ವನಿಯನ್ನು ಅಡಗಿಸುವ ಷಡ್ಯಂತ್ರವಾಗಿದ್ದು, ಹಿಂದೂ ಧಾರ್ಮಿಕ ಆಚರಣೆಗಳಿಗೆ ಭಾರಿ ಅಪಾಯ ಉಂಟುಮಾಡಲಿದೆ, ಈ ವಿಧೇಯಕ ಜಾರಿಗೆ ಬಂದಲ್ಲಿ ವೇದ–ಶಾಸ್ತ್ರ ಉಲ್ಲೇಖ, ಧರ್ಮ ಪ್ರಚಾರ, ಶಾಸ್ತ್ರಾರ್ಥ, ಮತಾಂತರ ಅಥವಾ ಮತೀಯವಾದದ ಟೀಕೆ ಮುಂತಾದ ಮೂಲಭೂತ ಹಿಂದೂ ಚಟುವಟಿಕೆಗಳೇ ಅಪರಾಧವಾಗುವ ಸಾಧ್ಯತೆ ಇದೆ` ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತರಾದ ಪೂಜನೀಯ ರಮಾನಂದ ಗೌಡ ಅವರು ಉಪಸ್ಥಿತರಿದ್ದು, ಹಿಂದೂಗಳಿಗೆ ಧರ್ಮಾಚರಣೆಯ ಮಹತ್ವ, ಧರ್ಮಶಿಕ್ಷಣ ಹಾಗೂ ಆಧ್ಯಾತ್ಮಿಕ ಸಾಧನೆಯ ಬಗ್ಗೆ ಮಾರ್ಗದರ್ಶನ ಮಾಡಿದರು. ಅವರು ಹಿಂದೂ ಸಮಾಜವು ತನ್ನ ಧರ್ಮ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ರಕ್ಷಿಸಲು ಏಕತೆಯಿಂದ ನಿಲ್ಲಬೇಕೆಂದು ಕರೆ ನೀಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

