ಹಾಸನ: ಶಿಕ್ಷಣ ಕ್ಷೇತ್ರದಲ್ಲಿ ನಿವೃತ್ತಿಯ ನಂತರವೂ "ನಮ್ಮ ಶಾಲೆ" ಮತ್ತು "ನಮ್ಮೂರ ಶಾಲೆ" ಎಂಬ ಪರಿಕಲ್ಪನೆಯಡಿಯಲ್ಲಿ ಹತ್ತನೇ ತರಗತಿಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತೀವರ್ಷವೂ ನಗದು ಬಹುಮಾನಗಳನ್ನು ನೀಡುತ್ತಾ ಶಿಕ್ಷಣ ಸೇವೆಯಲ್ಲಿ ತೊಡಗಿರುವ ನಿವೃತ್ತ ಶಿಕ್ಷಣಾಧಿಕಾರಿ ಜೆ.ಬಿ. ತಮ್ಮಣ್ಣಗೌಡರನ್ನು ಬೆಂಗಳೂರಿನ ಜನ್ಮಭೂಮಿ ಸಾಂಸ್ಕೃತಿಕ ನಾಗರೀಕರ ವೇದಿಕೆ (ನೋಂ) ಯು ಗುರುತಿಸಿ, 2025 ನೇ ವರ್ಷದಲ್ಲಿ "ಶಿಕ್ಷಣ ರತ್ನ" ಪ್ರಶಸ್ತಿಗೆ ಆಯ್ಕೆ ಮಾಡಿದೆ. ದಿನಾಂಕ : 29-12-2025 ರ ಸೋಮವಾರದಂದು ಶ್ರೀ ಕೃಷ್ಟದೇವರಾಯ ಕಲಾಮಂದಿರ, ವೈಯ್ಯಾಲಿಕಾವಲ್, ಮಲ್ಲೇಶ್ವರಂ ಬೆಂಗಳೂರು ಇಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಸಂಸ್ಥೆಯ ಸಂಸ್ಥಾಪಕ ಕಾರ್ಯಾಧ್ಯಕ್ಷರು ಮತ್ತು ಪತ್ರಕರ್ತರು ಆದ ಹೆಚ್. ಸಿ. ಕೃಷ್ಣಪ್ಪನವರು ತಿಳಿಸಿರುತ್ತಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


