ಹಾಸನ: ಶಿಕ್ಷಣ ಸೇವೆಯೇ ನನ್ನ ಪೂಜೆ ಎನ್ನುತ್ತಾ ಶಿಕ್ಷಣ ಕ್ಷೇತ್ರದಲ್ಲಿ ನಿವೃತ್ತಿಯ ನಂತರವೂ "ನಮ್ಮ ಶಾಲೆ" ಎಂಬ ಪರಿಕಲ್ಪನೆಯಡಿಯಲ್ಲಿ ಹಾಸನ ತಾಲ್ಲೂಕಿನ ಕಂದಲಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ "ನಮ್ಮೂರ ಶಾಲೆ" ಎಂಬ ಪರಿಕಲ್ಪನೆಯಡಿಯಲ್ಲಿ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಹೋಬಳಿಯ ಹುಟ್ಟೂರಾದ ಜಿನ್ನೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡಿ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತೀವರ್ಷವೂ ನಗದು ಬಹುಮಾನಗಳನ್ನು ನೀಡುತ್ತಾ ಶಿಕ್ಷಣ ಸೇವೆಯಲ್ಲಿ ತೊಡಗಿರುವ ನಿವೃತ್ತ ಶಿಕ್ಷಣಾಧಿಕಾರಿ ಜೆ.ಬಿ. ತಮ್ಮಣ್ಣಗೌಡರನ್ನು ಬೆಂಗಳೂರಿನ ಜನ್ಮಭೂಮಿ ಸಾಂಸ್ಕೃತಿಕ ನಾಗರೀಕರ ವೇದಿಕೆ (ನೋಂ) ಯು ಗುರುತಿಸಿ, 2025 ನೇ ವರ್ಷದಲ್ಲಿ "ಶಿಕ್ಷಣ ರತ್ನ" ಪ್ರಶಸ್ತಿಯನ್ನು ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಿದೆ.
ಬೆಂಗಳೂರು ಮಲ್ಲೇಶ್ವರಂನ ವೈಯಾಲಿಕಾವಲ್ ಶ್ರೀಕೃಷ್ಣದೇವರಾಯ ಕಲಾಮಂದಿರದಲ್ಲಿ ಸೋಮವಾರ (ಡಿ.29) ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಕಾರ್ಯಾಧ್ಯಕ್ಷ ಹೆಚ್. ಸಿ. ಕೃಷ್ಣಪ್ಪ, ವಿಜಯನಗರದ ಬಸವಕಲ್ಯಾಣ ಮಠದ ಪರಮಪೂಜ್ಯ ಶ್ರೀ ಶ್ರೀ ಮಹಾದೇವಸ್ವಾಮೀಜಿಯವರು, ಬಾಗಲೂರು ಮಠ ಬೆಂಗಳೂರಿನ ಪರಮ ಪೂಜ್ಯ ಶ್ರೀಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು, ವೇದಿಕೆಯ ಗೌರವಾಧ್ಯಕ್ಷ ಮಹೇಂದ್ರ ಮುನ್ನೋತ್, ವೇದಿಕೆಯ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ, ಹಿರಿಯ ಪತ್ರಕರ್ತ ಶ್ರೀಧರ, ನೇತ್ರ ಚಿಕಿತ್ಸಕ ತಜ್ಞ ಡಾ|| ಸಂದೀಪ್ ಮತ್ತಿತರರು ಹಾಜರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


