ಎಸ್‌ಸಿಎಸ್‌ ಕಾಲೇಜು: ಮಾನವ ಕಳ್ಳಸಾಣೆ ತಡೆ, ಮಾದಕ ವಸ್ತುಗಳ ದುಷ್ಪರಿಣಾಮ ಜಾಗೃತಿ ಉಪನ್ಯಾಸ

Upayuktha
0


ಮಂಗಳೂರು: ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ, ಮಾನವ ಕಳ್ಳಸಾಗಣಿಕೆ ತಡೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಕಾನೂನು ಅರಿವು ಜಾಗೃತಿ ಕಾರ್ಯಕ್ರಮ ನವೆಂಬರ್ 24 ಸೋಮವಾರ ಮಂಗಳೂರಿನ ಎಸ್.ಸಿ.ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ  “ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ–1986 ಮತ್ತು ತಿದ್ದುಪಡಿ ಕಾಯ್ದೆ–2016; ಮಾನವ ಕಳ್ಳಸಾಗಣಿಕೆ ತಡೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಲಾಯಿತು.


ಕಾಲೇಜಿನ ಮಾನವ ಹಕ್ಕುಗಳ ಘಟಕ, ಮಾನವ ಕಳ್ಳಸಾಗಣೆ ವಿರೋಧಿ ಘಟಕ ಹಾಗೂ ಮಾದಕ ವ್ಯಸನ ನಿರೋಧಕ ಘಟಕಗಳ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ ಮತ್ತು ಮಕ್ಕಳ ರಕ್ಷಣಾ ಘಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಸಹಯೋಗದಲ್ಲಿ ಆಯೋಜಿಸಲಾಗಿತ್ತು.


ಕಾರ್ಯಕ್ರಮವನ್ನು ಎಸ್.ಸಿ.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಯು.ಕೆ. ಖಾಲಿದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಶ್ರೀಮತಿ ಜೈಬುನ್ನಿಸಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಉದ್ಘಾಟನಾ ಭಾಷಣದ ಮೂಲಕ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವನ್ನು ನೀಡಿದರು.


ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಶ್ರೀಮತಿ ನಾಜಿಯಾ ಸುಲ್ತಾನಾ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು. ಅತಿಥಿ ಭಾಷಣದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಬಾಲ ಕಾರ್ಮಿಕರ ಮತ್ತು ಕಿಶೋರ ಕಾರ್ಮಿಕರ ಬಗ್ಗೆ ವಿವರಣೆ ನೀಡುವುದರ ಮುಖಾಂತರ  ಕಾನೂನಿನ ಅರಿವನ್ನು ಮೂಡಿಸಿದರು.  ಪ್ರಾಂಶುಪಾಲರಾದ ಶ್ರೀ ಹಾರ್ದಿಕ್ ಪಿ. ಚೌಹಾಣ್  ಬಂದಂತಹ ಅತಿಥಿಗಳನ್ನು ಸ್ವಾಗತಿಸಿದರು.


ಕಾರ್ಯಕ್ರಮದಲ್ಲಿ ಮೂರು ಪ್ರಮುಖ ವಿಷಯಗಳ ಕುರಿತು ಮಾನ್ಯ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಿದರು:


* ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮಂಗಳೂರು ಉರ್ವ ಪೊಲೀಸ್ ಠಾಣೆಯ ಉಪನಿರೀಕ್ಷಕ ಗುರುವಪ್ಪ ಕಾಂತಿ ಇವರು ಉಪನ್ಯಾಸ ನೀಡಿದರು.  

* ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ–1986 ಹಾಗೂ ತಿದ್ದುಪಡಿ ಕಾಯ್ದೆ–2016 ಸಂಬಂಧಿಸಿದಂತೆ ದ.ಕ. ಉಪವಿಭಾಗದ ಕಾರ್ಮಿಕಾಧಿಕಾರಿ ಕುಮಾರ್ ಬಿ.ಆರ್ ಇವರು ಬಾಲ ಕಾರ್ಮಿಕ ಪದ್ಧತಿಯನ್ನು ನಿಲ್ಲಿಸಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಬಗ್ಗೆ ತಿಳಿಸಿದರು.

* ಬಾಲ ಹಕ್ಕು ರಕ್ಷಣೆ ಮತ್ತು ದತ್ತು ನಿಯಮಗಳು ಬಗ್ಗೆ ದ.ಕ. ಜಿಲ್ಲೆಯ ಮಕ್ಕಳ ರಕ್ಷಣೆ ಅಧಿಕಾರಿ ಕುಮಾರ್ ಶೆಟ್ಟಿಗಾರ್ ಮಾಹಿತಿ ನೀಡಿದರು. 


ಈ ಕಾರ್ಯಕ್ರದಲ್ಲಿ ದ.ಕ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಶ್ರೀನಿವಾಸ್ ಹಾಗೂ ಮಂಗಳೂರು 4ನೇ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ರಾಜಶೇಖರ ರೆಡ್ಡಿ ಸಹಕರಿಸಿದರು.


ಎಲ್ಲಾ ಪ್ರಮುಖ ವಿಷಯಗಳಿಗೆ ಸಮಗ್ರ ಅರಿವು ಮೂಡಿಸುವಲ್ಲಿ ಈ ಜಾಗೃತಿ ಕಾರ್ಯಕ್ರಮ ಪರಿಣಾಮಕಾರಿ ಆಗಿದ್ದು, 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು.


ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ವರ್ಷ ರೈ ನಿರೂಪಿಸಿದರು, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಸುದೀಪ್ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top