ಎಸ್.ಎಸ್.ಎಲ್.ಸಿ. ಶಿಕ್ಷಣ ಕ್ಷೇತ್ರ ಮಕ್ಕಳ ಜೀವನದ ಒಂದು ತಿರುವು: ಪ್ರಶಾಂತ್ ಕೆ.ಎಸ್.

Upayuktha
0


ದಾವಣಗೆರೆ: ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮೊಬೈಲ್ ಬಿಟ್ಟು ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಬೇಕಾಗಿದೆ ಎಸ್.ಎಸ್.ಎಲ್.ಸಿ. ಶಿಕ್ಷಣ ಕ್ಷೇತ್ರ ಮಕ್ಕಳ ಜೀವನದ ಒಂದು ತಿರುವು ಮಕ್ಕಳು ಮುಂದಿನ ಜೀವನದ ಬಗ್ಗೆ ಈಗಲೇ ಮಾನಸಿಕವಾಗಿ ಬದ್ಧತೆಯಿಂದ, ಕರ್ತವ್ಯನಿಷ್ಠೆಯಿಂದ, ಸಮಯ ಪ್ರಜ್ಞೆಯೊಂದಿಗೆ ತೊಡಗಿಸಿಕೊಂಡರೆ ಬದುಕು ಸಾರ್ಥಕತೆ ಆಗುತ್ತದೆ. ಉತ್ತಮ ಫಲಿತಾಂಶದೊಂದಿಗೆ ಹೆತ್ತ ತಂದೆ-ತಾಯಿಗಳಿಗೆ ವ್ಯಾಸಂಗ ಮಾಡಿದ ವಿದ್ಯಾಸಂಸ್ಥೆಗೆ ಹುಟ್ಟಿದ ಊರಿಗೆ ಒಳ್ಳೆಯ ಹೆಸರು ತರಬೇಕಾಗಿದೆ ಎಂದು ದಾವಣಗೆರೆ ಪೊಲೀಸ್ ನಿರೀಕ್ಷಕ ಪ್ರಶಾಂತ್ ಕೆ.ಎಸ್. ತಮ್ಮ ಮನದಾಳದ ಮಾತು ಹಂಚಿಕೊಂಡರು.


ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ದಾವಣಗೆರೆಯ ಕಲಾಕುಂಚ ಸಾಂಸ್ಕøತಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಇತ್ತೀಚಿಗೆ  ಪಿ.ಜೆ. ಬಡಾವಣೆಯ ಪೊಲೀಸ್ ಸಮುದಾಯ ಭವನದಲ್ಲಿ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಪರೀಕ್ಷಾ ಪೂರ್ವಭಾವಿ ತಯಾರಿ ಉಚಿತ ಕಾರ್ಯಾಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಪೊಲೀಸ್ ಅಧಿಕಾರಿ ರವೀಂದ್ರ ಕಾಳಭೈರವ ಮಾತನಾಡಿ, ಮಕ್ಕಳು ಪರೀಕ್ಷೆಗೆ ಅಷ್ಠೆ ಸೀಮಿತವಾಗದೆ ಮುಂದಿನ ಸಾಧನೆಗಳಿಗೆ ಜಾಗೃತೆಯೊಂದಿಗೆ ಹೆತ್ತ ತಂದೆ-ತಾಯಿಗಳ ಕನಸು ನನಸು ಮಾಡಬೇಕಾಗಿದೆ ಎಂದರು.


ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ಪರೀಕ್ಷೆ ಎದುರಿಸುವ ಧೈರ್ಯ ತುಂಬಿ ಶಿಕ್ಷಣದ ಬಗ್ಗೆ ಮಾರ್ಗದರ್ಶನ ನೀಡಿ, ತಂದೆ-ತಾಯಿಗಳ ಪೊಲೀಸ್ ಅಧಿಕಾರಿಗಳ ಅನುಮತಿ ಪಡೆದು ಉತ್ತಮ ಫಲಿತಾಂಶಕ್ಕೆ ಪ್ರತಿಜ್ಞಾವಿಧಿ ಬೋಧಿಸಿದರು.


ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕಿ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷೆ ಹೇಮಾ ಶಾಂತಪ್ಪ ಪೂಜಾರಿ, ಪೊಲೀಸ್ ಅಧಿಕಾರಿ ವೇದಮೂರ್ತಿ ವೇದಿಕೆಯಲ್ಲಿ ಗೌರವ ಉಪಸ್ಥಿತರಿದ್ದರು. ಪೊಲೀಸ್ ಅಧಿಕಾರಿ ಎಸ್.ವಿ.ಅಣ್ಣಿಗೇರಿಯವರ ಪ್ರಾರ್ಥನೆಯೊಂದಗೆ ಪ್ರಾರಂಭವಾದ ಸಮಾರಂಭಕ್ಕೆ ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಸ್ವಾಗತಿಸಿ, ನಿರೂಪಣೆ ಮಾಡಿ, ಕೊನೆಯಲ್ಲಿ ವಂದಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top