ದಾವಣಗೆರೆ: ಹುಬ್ಬಳ್ಳಿಯ “ವಿಶ್ವದರ್ಶನ” ಕನ್ನಡ ದಿನಪತ್ರಿಕೆಯವತಿಯಿಂದ ದಾವಣಗೆರೆಯ ಖ್ಯಾತ “ದಾವಣಗೆರೆಯ ಸಾಂಸ್ಕೃತಿಕ ರಾಯಭಾರಿ” ಎಂದು ಹೆಸರು ಗಳಿಸಿದ ಕಳೆದ ನಲವತ್ತು ವರ್ಷಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಕಲೆ, ಸಾಹಿತ್ಯ, ಸಂಗೀತ, ಯಕ್ಷಗಾನ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಲಿಗ್ರಾಮ ಗಣೇಶ್ ಶೆಣೈಯವರನ್ನು “ಕರ್ನಾಟಕ ಕಲಾ ಕಾಯಕ ರತ್ನ” ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹುಬ್ಬಳ್ಳಿಯ “ವಿಶ್ವದರ್ಶನ” ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕದ ಡಾ.ಎಸ್.ಎಸ್.ಪಾಟೀಲ್ ತಿಳಿಸಿದ್ದಾರೆ.
ಶನಿವಾರ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ 2025-26ನೇ ಸಾಲಿನ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು ಕಲಾಕುಂಚ, ಯಕ್ಷರಂಗ, ಸಿನಿಮಾಸಿರಿ, ಕರ್ನಾಟಕ ಸಗಮ ಸಂಗೀತ ಪರಿಷತ್, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಸಿನಿಮಾಸಿರಿ ಸಂಸ್ಥೆ, ಕರ್ನಾಟಕ ಸಗಮ ಸಂಗೀತ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಛಾಯಾಗ್ರಾಹಕ ಸಂಘ, ಗೌಡ ಸಾರಸ್ವತ ಸಮಾಜ, ನವಜ್ಯೋತಿ ಕ್ಲಬ್, ಕರಾವಳಿ ಮಿತ್ರ ಮಂಡಳಿ, ಬಿಚ್ಕತ್ತಿ ಕುಟುಂಬ ಮುಂತಾದ ಅನೇಕ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


