ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ತಂಡಕ್ಕೆ ಆಯ್ಕೆಗೊಂಡಿದ್ದಾರೆ.
ಆಂಧ್ರಪ್ರದೇಶ ಕಾಕಿನಾಡದ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಡಿಸೆಂಬರ್ 10 ರಿಂದ 14ರ ವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ಚಾಂಪಿಯನ್‍ಶಿಪ್ 2025-26 ರಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




