ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

Upayuktha
0


ದಾವಣಗೆರೆ: ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು (ಡಿ.14) ಸಂಜೆ ವಿಧಿವಶರಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ ನಿಧನರಾದರು.


ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top