ಪುತ್ತೂರು: ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಕೀರ್ತನ್ ಕೆ. ಪಿ. ಇವರು ಭಾರತೀಯ ವಾಯುಪಡೆಯ ಏರ್ಮ್ಯಾನ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ನಿವಾಸಿಗಳಾದ ಪದ್ಮಯ್ಯ ಗೌಡ ಹಾಗೂ ಪುಷ್ಪಲತಾ ದಂಪತಿಗಳ ಸುಪುತ್ರನಾದ ಇವರು, ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ಪೂರೈಸಿರುತ್ತಾರೆ.
ಡಿಸೆಂಬರ್ 29ರಿಂದ ಬೆಳಗಾವಿಯಲ್ಲಿ ಆರು ತಿಂಗಳುಗಳ ಅವಧಿಯ ತರಬೇತಿಯನ್ನು ಪಡೆಯಲಿದ್ದು, ಇವರ ಈ ಸಾಧನೆಯನ್ನು ಗುರುತಿಸಿ ಕಾಲೇಜಿನ ವತಿಯಿಂದ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ., ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಲಕ್ಷ್ಮೀ ಪ್ರಸಾದ್, ಸಹ ಕಾರ್ಯನಿರ್ವಹಣಾ ಅಧಿಕಾರಿ ವೆಂಕಟ್ರಮಣ ರಾವ್ ಮಂಕುಡೆ, ಪ್ರಾಂಶುಪಾಲ ದೇವಿಚರಣ್ ರೈ ಎಂ. ಹಾಗೂ ಉಪನ್ಯಾಸಕ–ಉಪನ್ಯಾಸಕೇತರವೃಂದದವರು ಉಪಸ್ಥಿತರಿದ್ದು, ಶುಭಹಾರೈಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


