ಡಿ.21ರಂದು ರಾಜಾಂಗಣದಲ್ಲಿ 'ಶ್ರೀಕೃಷ್ಣ ಸಮರ್ಪಣೋತ್ಸವ'

Upayuktha
0


ಉಡುಪಿ: ವಿಶ್ವ ಗೀತಾ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ವಿಶೇಷ ಕಾರ್ಯಕ್ರಮವಾಗಿ ಅಂತಾರಾಷ್ಟ್ರೀಯ ಕೃಷ್ಣಪ್ರಜ್ಞಾಸಂಸ್ಥೆ (ಇಸ್ಕಾನ್) ಆಶ್ರಯದಲ್ಲಿ ಡಿ.21ರಂದು ಬೆಳಿಗ್ಗೆ 10 ಗಂಟೆಗೆ 'ಶ್ರೀಕೃಷ್ಣ ಸಮರ್ಪಣೋತ್ಸವ' ಕಾರ್ಯಕ್ರಮ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮದಲ್ಲಿ ಹರಿದ್ವಾರ ನಿರಂಜನಿ ಅಖಾಡದ ಆಚಾರ್ಯ ಮಹಾಮಂಡಲೇಶ್ವರ ಶ್ರೀಕೈಲಾಶಾನಂದ ಗಿರಿ ಮಹಾರಾಜ್ ಆಗಮಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಲಿದ್ದು, ಬೆಂಗಳೂರು ಇಸ್ಕಾನ್ ಅಕ್ಷಯಪಾತ್ರ ಫೌಂಡೇಶನ್ ಅಧ್ಯಕ್ಷ ಮಧುಪಂಡಿತ್ ದಾಸ್ ಅಭ್ಯಾಗತರಾಗಿರುವರು.


ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳ‌ ಸಂದರ್ಭದಲ್ಲಿ ಶ್ರೀ ಪ್ರಭುಪಾದರಿಗೆ ವಿಶ್ವಗುರು ಬಿರುದು ನೀಡಿ ಗೌರವಿಸಿದ ಹಿನ್ನೆಲೆಯಲ್ಲಿ ಉಡುಪಿ‌ ಕೃಷ್ಣ ಸನ್ನಿಧಿಗೆ ಬಿರುದು ಸಮರ್ಪಿಸಲಾಗುವುದು. ಬೆಳಗ್ಗೆ ಇಸ್ಕಾನ್ ಭಕ್ತರಿಂದ ಸಂಕೀರ್ತನೆ ನಡೆಯಲಿದೆ. ಇಸ್ಕಾನ್ ಬೆಂಗಳೂರು ಸಂಸ್ಥೆಯ ಉಪಾಧ್ಯಕ್ಷ ಶ್ರೀಚಂಚಲಾಪತಿ ದಾಸ್ ಉಪಸ್ಥಿತರಿರುವರು.


ಈ ಸಂದರ್ಭದಲ್ಲಿ‌ ವಿಶ್ವಗುರು ಪ್ರಶಸ್ತಿ ಪ್ರದಾನದ  ಕ್ಷಣಗಳ ವೀಡಿಯೋ ಪ್ರದರ್ಶನ, ಪರ್ಯಾಯ ಉಭಯ ಶ್ರೀಗಳ ಉಪಸ್ಥಿತಿಯಲ್ಲಿ ಶ್ರೀಕೃಷ್ಣ ಸಮರ್ಪಣೋತ್ಸವ ಫಲಕ ಅನಾವರಣ, ಶ್ರೀಗಳಿಂದ ಆಶೀರ್ವಚನ, ಪುಸ್ತಕ ಬಿಡುಗಡೆ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ ಎಂದು ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರಕಟನೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top