ಶಿಕ್ಷಣದಿಂದಲೇ ಸಾಮಾಜಿಕ ಅಭಿವೃದ್ಧಿ ಸಾಧ್ಯ: ಶಾಸಕ ಕಾಶಪ್ಪನವರ

Upayuktha
0

ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ: ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ





ಹುನಗುಂದ: ಶಿಕ್ಷಣದಿಂದಲೇ ಸಾಮಾಜಿಕ ಅಭಿವೃದ್ಧಿ ಸಾಧ್ಯ. ಅದಕ್ಕಾಗಿ ಕ್ಷೇತ್ರದಾದ್ಯಂತ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. 


ಗುರುವಾರ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ. ಹಾಗೂ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಯಾವ ವಿದ್ಯಾರ್ಥಿಯೂ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ನಮ್ಮ ಸರ್ಕಾರದ ಉದೇಶದಿಂದ ಕೇತ್ರದಾದ್ಯಂತ ಎಲ್ಲ ಶಾಲೆ-ಕಾಲೇಜುಗಳಲ್ಲಿ ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ಬೋಧನಾ ಕೊಠಡಿಗಳನ್ನು ನಿರ್ಮಿಸಲಾಗಿದೆ.  ಜಿಲ್ಲೆಯಲ್ಲಿಯೇ ಅತ್ಯುತ್ತಮ ಕಾಲೇಜು ಎಂದು ಹೆಗ್ಗಳಿಕೆ ಗಳಿಸಿರುವ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಸ್ನೇಹಿ ವಾತಾವರಣದ ಜೊತೆಗೆ ಗುಣಮಟ್ಟದ ವಿಷಯದಲ್ಲಿ ರಾಜ್ಯದ ಯಾವುದೇ ಕಾಲೇಜಿಗೂ ಸ್ಪರ್ಧೆ ನೀಡಬಲ್ಲ ಎಲ್ಲ ಸೌಕರ್ಯಗಳನ್ನು ಹೊಂದಿದೆ.ಇದಕ್ಕೆ ಕಾಲೇಜು ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದರು.


ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ  ವಿಜಯ ಮಹಾಂತೇಶ ಗದ್ದನಕೇರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಜ್ಯಾಭಿಮಾನ ಮತ್ತು ದೇಶಾಭಿಮಾನ ಮೂಡಿಸುವುದೇ ಶಿಕ್ಷಣದ ಉದೇಶವಾಗಿದೆ. ಆ ದಿಸಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಮ್ಮ ಕಾಲೇಜ ಪ್ರಾಧ್ಯಾಪಕ ಮತ್ತು ಸಿಬ್ಬಂದಿ ವೃಂದ ಸ್ತುತ್ಯಾರ್ಹವಾಗಿದೆ ಎಂದು ಅಭಿಪ್ರಾಯಪಟ್ಟರು. 


ರಾಮದುರ್ಗದ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಡಿ. ಕಮತಗಿ ಮಾತನಾಡಿ ಶಾಸಕರ ನೇತೃತ್ವದಲ್ಲಿ ಕಾಲೇಜು ಅಭಿವೃದ್ಧಿ ಹೊಂದಿದ್ದು ಅವರ ಶೈಕ್ಷಣಿಕ ದೂರದೃಷ್ಟಿಗೆ ನಿದರ್ಶನವಾಗಿದೆ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬ್ಯಾಂಡ್ಮಿಂಟನ್ ಮೈದಾನವನ್ನು ಶಾಸಕರು ಉದ್ಘಾಟಿಸಿದರು.


ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸಿ.ಜಿ.ಹವಾಲ್ದಾರ, ದೇವು ಡಂಬಳ,ಎ.ಜಿ, ಹುಚನೂರ, ರಾಣಿ ತೋಪಲಕಟ್ಟಿ, ಸಾವಿತ್ರ ತಪೇಲಿ ಹಾಗೂ ಡಾ.ಎ.ಬಿ. ವಗ್ಗರ, ಡಾ.ಕೆ.ಎಮ್. ಸಾರವಾನ ಹಾಗೂ ಕಾಲೇಜಿನ ಸರ್ವ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಇದ್ದರು. ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಪ್ರೊ.ಬಿ.ವೈ. ಅಲೂರ ಅತಿಥಿಗಳ ಪರಿಚಯ ಹಾಗೂ ಸ್ವಾಗತಿಸಿದರು, ಪ್ರಾಧ್ಯಾಪಕ ಪ್ರೊ.ಸುರೇಶ ಎಚ್. ಎಸ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಐ.ಕ್ಯು. ಎ. ಸಿ ಸಂಚಾಲಕ ರುದ್ರೇಶ ಅಳ್ಳಿ ಅತಿಥಿ ಮತ್ತು ಮತ್ತು ಸಾಧಕರಿಗೆ ಸನ್ಮಾನ ಕಾರ್ಯ ನೆರವೇರಿಸಿದರು. ಡಾ. ಎಂ. ಬಿ ಒಂಟಿ ನಿರೂಪಿಸಿದರು. ಪ್ರೊ. ದಾನಮ್ಮ ಮಠದ ವಂದಿಸಿದರು.ನಂತರ ವಿದ್ಯಾರ್ಥಿಗಳಿಂದ ನಡೆದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಸಕರಾದಿಯಾಗಿ ಸಭಿಕರು ವೀಕ್ಷಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top