ಕ್ರೀಡೆ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು: ಡಾ. ಸತೀಶ್ಚಂದ್ರ ಎಸ್.

Upayuktha
0


ಉಜಿರೆ: ದೈಹಿಕ ಕ್ಷಮತೆಯು ಎಲ್ಲರಿಗೂ ಸಹ ಅತ್ಯವಶ್ಯಕ. ಪ್ರತಿಯೊಬ್ಬರಿಗೂ ಕ್ರೀಡಾ ಮನೋಭಾವನೆ ಇದ್ದರೆ ಜೀವನದಲ್ಲಿ ಶಿಸ್ತು ಸಂಯಮಗಳು ತಾನಾಗಿ ಬರುತ್ತವೆ. ಕೇವಲ ಸ್ಪರ್ಧೆಗಾಗಿ ಕ್ರೀಡೆಯಾಗಬಾರದು. ಕ್ರೀಡೆ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರು ಹೇಳಿದರು.


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಗ್ರಾಮೀಣ ಮಟ್ಟದ ಶಿಕ್ಷಣ ಸಂಸ್ಥೆಯ ಹೆಸರನ್ನು ರಾಷ್ಟಿçÃಯ ಮಟ್ಟದ ತನಕ ಕೊಂಡೊಯ್ದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳಿಗೆ ಮಾದರಿ ಎಂದು ಹೇಳಿದರು. 


ಮುಖ್ಯ ಅಭ್ಯಾಗತರಾಗಿ ಆಗಮಿಸಿದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಕರುಣಾಕರ ಶೆಟ್ಟಿಯವರು ವಾರ್ಷಿಕ ಕ್ರೀಡಾಕೂಟದ ಧ್ವಜಾರೋಹಣ ಮಾಡಿ ಮಾತನಾಡಿದರು. ಆರೋಗ್ಯವಂತರಾಗಿ ಬದುಕಲು ಕ್ರೀಡೆಗಳಲ್ಲಿ ಎಲ್ಲರೂ ಭಾಗವಹಿಸಬೇಕು, ದೈಹಿಕ ಕ್ಷಮತೆ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆ ಅತಿ ಮುಖ್ಯ. ಕ್ರೀಡೆಯಲ್ಲಿ ತೊಡಗಿಸಿಕೊಂಡವರು ಜೀವನದಲ್ಲಿ ಸೋಲನ್ನು ಒಪ್ಪಿಕೊಳ್ಳುವ ಗುಣ ಹೊಂದಿ ಸಾರ್ಥಕ ಜೀವನ ಕಾಣುತ್ತಾರೆ ಎಂದು ಹೇಳಿದರು.


ಕಾಲೇಜಿನ ಪ್ರಾಚಾರ್ಯರಾದ ಶ್ರೀ ಪ್ರಮೋದ್ ಕುಮಾರ್ ಬಿ. ಅವರು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಧ. ಮಂ. ಪದವಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ವಿಶ್ವನಾಥ ಪಿ., ಎಸ್.ಡಿ.ಎಂ. ಕ್ರೀಡಾಸಂಘದ ಕಾರ್ಯದರ್ಶಿ ರಮೇಶ್ ಹೆಚ್, ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪಪ್ರಾಚಾರ್ಯರಾದ ಡಾ. ರಾಜೇಶ್ ಬಿ. ಹಾಗೂ ಎಸ್.ಡಿ.ಎಂ. ಪ. ಪೂ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ್ ಪೂಂಜ ಉಪಸ್ಥಿತರಿದ್ದರು.


ಕ್ರೀಡಾಕೂಟದಲ್ಲಿ ನಡೆದ ಆಕರ್ಷಕ ಪಥನ ಸಂಚಲನದಲ್ಲಿ ದ್ವಿತೀಯ ವಿಜ್ಞಾನ ‘ಸಿ’ ವಿಭಾಗ ಪ್ರಥಮ ಬಹುಮಾನ, ಪ್ರಥಮ ವಿಜ್ಞಾನ ‘ಹೆಚ್’ ವಿಭಾಗ ದ್ವಿತೀಯ ಬಹುಮಾನ ಹಾಗೂ ದ್ವಿತೀಯ ವಿಜ್ಞಾನ ‘ಎ’ ವಿಭಾಗ ತೃತೀಯ ಬಹುಮಾನ ಪಡೆದರು.


ರಾಷ್ಟ್ರೀಯ ಕ್ರೀಡಾಪಟುಗಳಾದ ದರ್ಶನ್, ಪ್ರಣವ್, ಸುಪ್ರಿಯಾ ಹಾಗೂ ಚಂದು ಇವರು ಕ್ರೀಡಾಜ್ಯೋತಿ ಬೆಳಗಿಸಿದರು. ರಾಷ್ಟ್ರೀಯ ಮಟ್ಟದ ನೆಟ್‌ಬಾಲ್ ಕ್ರೀಡಾಪಟು ದೀಪ್ತಿ ಹೆಚ್.ಎಸ್. ರವರು ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.


ಸಂಖ್ಯಾಶಾಸ್ತ್ರ ಉಪನ್ಯಾಸಕಿ ಅಂಕಿತಾ ಎಂ.ಕೆ. ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕ ರಾಜು ಎ.ಎ. ವಂದಿಸಿದರು. ಕನ್ನಡ ಉಪನ್ಯಾಸಕ ಡಾ. ಮಹಾವೀರ್ ಜೈನ್ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top