ಉಡುಪಿ: ಪೂಜ್ಯ ಪುತ್ತಿಗೆ ಶ್ರೀಪಾದರ ವಿಶ್ವಗೀತಾ ಪರ್ಯಾಯದಲ್ಲಿ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯುತ್ತಿದ್ದು ಇದೀಗ ಶಿಖರ ಪ್ರಾಯವೆಂಬಂತೆ, 30 ಡಿಸೆಂಬರ್ 2025 ದಶಮಿಯ ಶುಭದಿನದಂದು ಸಾಯಂಕಾಲ 5:00 ಗಂಟೆಗೆ ರಾಜಾಂಗಣದಲ್ಲಿ ಲೋಕಕಲ್ಯಾಣಾರ್ಥ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ಆಯೋಜಿಸಲಾಗಿದೆ.
ಶ್ರೀವಾರಿ ಫೌಂಡೇಶನ್ ನ ಶ್ರೀ ವೆಂಕಟೇಶ್ ಮೂರ್ತಿ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯುವ ಈ ಕಲ್ಯಾಣೋತ್ಸವದಲ್ಲಿ ತಿರುಪತಿ- ತಿರುಮಲದಿಂದ ಬಂದ ಲಡ್ಡು ಮತ್ತು ಮಂತ್ರಾಕ್ಷತೆ ಪ್ರಸಾದವನ್ನು ಭಕ್ತಾದಿಗಳಿಗೆ ವಿತರಿಸಲಾಗುವುದು.
ಸಾರ್ವಜನಿಕರು ಈ ಪುಣ್ಯ ಉತ್ಸವದಲ್ಲಿ ಭಾಗವಹಿಸಿ, ಶ್ರೀ ಭೂ ಸಹಿತ ಶ್ರೀನಿವಾಸ ದೇವರ ಪರಮಾನುಗ್ರಹಕ್ಕೆ ಪಾತ್ರರಾಗುವಂತೆ ಶ್ರೀಮಠದ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


