ಡಿ.13: ಭಾರತೀಯ ಜ್ಞಾನ ಮತ್ತು ಸಂಸ್ಕೃತ ಪರಂಪರೆಯ ಮೂಲಕ ಸುಸ್ಥಿರತೆಯ ಕುರಿತಾದ ಅಂತರರಾಷ್ಟ್ರೀಯ ಸಮ್ಮೇಳನ

Upayuktha
0

ಶ್ರೀನಿವಾಸ ವಿಶ್ವವಿದ್ಯಾಲಯ ಯೋಗ - ಸಂಸ್ಕೃತ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ



ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಯೋಗ - ಸಂಸ್ಕೃತ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು, ಡಿಸೆಂಬರ್ 13 ರಂದು, ಭಾರತೀಯ ಜ್ಞಾನ ಮತ್ತು ಸಂಸ್ಕೃತ ಪರಂಪರೆಯ ಮೂಲಕ ಸುಸ್ಥಿರತೆಯ ಕುರಿತಾದ ಅಂತರರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಲಿದೆ.


2021 ರಲ್ಲಿ ಪ್ರಾರಂಭವಾದ ಸಂಸ್ಕೃತ ವಿಭಾಗದಲ್ಲಿ 90 ಕ್ಕೂ ಅಧಿಕ ವಿದ್ಯಾರ್ಥಿಗಳು ಪಿ.ಹೆಚ್.ಡಿ. ಸಂಶೋಧನೆಯನ್ನು ಮಾಡುತ್ತಿದ್ದಾರೆ. ಶ್ರೀನಿವಾಸ ವಿಶ್ವವಿದ್ಯಾಲಯವು ಸಂಸ್ಕೃತ ಭಾಷೆಯ ಕುರಿತಾದ ಮೊದಲ ಅಂತರರಾಷ್ಟ್ರೀಯ ಸಮ್ಮೇಳನವನ್ನು 2023 ರಲ್ಲಿ ಹಾಗೂ ದ್ವಿತೀಯ ಅಂತರರಾಷ್ಟ್ರೀಯ ಸಮ್ಮೇಳನವನ್ನು 2024 ರಲ್ಲಿ ಆಯೋಜಿಸಿತ್ತು. ಭಾರತೀಯ ಜ್ಞಾನ ಮತ್ತು ಸಂಸ್ಕೃತ ಪರಂಪರೆಯ ಕುರಿತಾದ ಮೂರನೇ ಆವೃತ್ತಿಯ ಅಂತರರಾಷ್ಟ್ರೀಯ ಸಮ್ಮೇಳನವನ್ನು ಶನಿವಾರ, ಡಿಸೆಂಬರ್ 13 ರಂದು, ಮುಕ್ಕ ಕ್ಯಾಂಪಸ್ ನಲ್ಲಿ ಆಯೋಜಿಸಲಿದ್ದೇವೆ.


ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಸಿಎ ಎ.ರಾಘವೇಂದ್ರ ರಾವ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಶ್ರೀ ಅದಮಾರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಆಶೀರ್ವಚನೆ ಮಾಡಲಿದ್ದಾರೆ.


ಉತ್ತರ ಪ್ರದೇಶದ ಸಂಸ್ಕೃತಿ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳು ಹಾಗೂ ಗೋಸ್ವಾಲ್ ಆಯುರ್ವೇದ - ಜೀವ ವಿಜ್ಞಾನ ಶಾಸ್ತ್ರ ಸಂಸ್ಥೆಯ ಸಂಸ್ಥಾಪಕರಾದ ಡಾ. ತನ್ಮಯ್ ಗೋಸ್ವಾಮಿ, ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ಮತ್ತು ನೇಪಾಳದ ಮಾದೇಶ್ ವಿಶ್ವವಿದ್ಯಾಲಯದ ಡೀನ್ ಪ್ರೊ. ಡಾ. ಅಂಜಯ್ ಕುಮಾರ್ ಮಿಶ್ರಾ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರುಗಳಾದ ಶ್ರೀಮತಿ. ಎ. ವಿಜಯಲಕ್ಷ್ಮಿ ಆರ್. ರಾವ್ ಹಾಗೂ ಪ್ರೊ. ಶ್ರೀಮತಿ. ಎ. ಮಿತ್ರ ಎಸ್ ರಾವ್, ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ, ಬೆಂಗಳೂರಿನ ಪ್ರಸಿದ್ಧ ಕ್ಯಾನ್ಸರ್ ತಜ್ಞರು ಹಾಗೂ ವೈದ್ಯರಾದ ಪ್ರೊ. ಡಾ. ಉದಯ ಕುಮಾರ್ ಮಯ್ಯ ರವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಸಂಚಾಲಕರು ಹಾಗೂ ಶ್ರೀನಿವಾಸ್ ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಪ್ರೊ. ಡಾ. ಎ. ಆರ್. ಶಬರಾಯ ಮತ್ತು ಸಂಚಾಲಕರು ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ನಿರ್ದೇಶಕರಾದ ಪ್ರೊ. ಡಾ. ಪ್ರವೀಣ್ ಬಿ. ಎಂ., ಹಾಗೂ ಸಂಯೋಜಕರಾದ ಪ್ರೊ. ಡಾ. ಬಿ. ಗೋಪಾಲಾಚಾರ್, ಪ್ರೊ. ಡಾ. ಗಣಪತಿ ಭಟ್, ಪ್ರೊ. ಡಾ. ಸೋಂದಾ ಭಾಸ್ಕರ್ ಭಟ್, ಪ್ರೊ. ಡಾ. ಅರವಿಂದ ಶಾನಭಾಗ್, ಪ್ರೊ. ಡಾ. ಶಂಕರನಾರಾಯಣ ಭಟ್ ಮತ್ತು ಪ್ರೊ. ಡಾ. ದಿವಾಕರ ಭಟ್ ರವರು ಉಪಸ್ಥಿತರಿರಲಿದ್ದಾರೆ.


ದೇಶ ವಿದೇಶಗಳಿಂದ ಪ್ರಸಿದ್ಧ ಸಂಸ್ಕೃತ ವಿದ್ವಾಂಸರು ಮತ್ತು ಸಂಶೋಧಕರು ಈ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಸಂಸ್ಕೃತ ಮತ್ತು ಆರೋಗ್ಯ ವಿಜ್ಞಾನ, ಭಾರತೀಯ ವೈದ್ಯಕೀಯ ಪದ್ಧತಿಗಳು, ಪ್ರಾಚೀನ ಭಾರತೀಯ ವಾಸ್ತುಶಿಲ್ಪ ಮತ್ತು ವಾಸ್ತು, ಪ್ರಾಚೀನ ಭಾರತೀಯ ಖಗೋಳ ವಿಜ್ಞಾನ ಮತ್ತು ಖಗೋಳ ಶಾಸ್ತ್ರ, ಪರಿಸರ ಸಂರಕ್ಷಣೆಯೊಂದಿಗೆ ಸಂಸ್ಕೃತ ಮತ್ತು ಕೃಷಿ, ಸಂಸ್ಕೃತ ಮತ್ತು ಮನೋವಿಜ್ಞಾನ, ಪ್ರಕೃತಿ ಚಿಕಿತ್ಸಾ ಪದ್ಧತಿ / ನ್ಯಾಚುರೋಪಥಿ, ಯೋಗ, ಆಯುರ್ವೇದ, ವೇದ, ಪುರಾಣ, ಭಗವದ್ಗೀತೆ, ಉಪನಿಷತ್ತುಗಳು, ಭಾರತದ ಮಹಾಕಾವ್ಯಗಳು, ನಾಟ್ಯಶಾಸ್ತ್ರ ಮತ್ತು ಸಂಗೀತ ಶಾಸ್ತ್ರ ವಿಷಯಗಳಲ್ಲಿ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ. 


ಈ ಸಮ್ಮೇಳನದಲ್ಲಿ, ಸಂಸ್ಕೃತ ಭಾಷೆಯ ಮೌಲ್ಯ, ಭಾರತೀಯ ಸಂಸ್ಕೃತಿ, ಕಲಾ ಪರಂಪರೆಯನ್ನು ಯುವ ಜನತೆಯು ತಿಳಿದುಕೊಳ್ಳಲು ಮತ್ತು ಪ್ರದರ್ಶನ ಮಾಡಲು ವೇದಿಕೆ ಕಲ್ಪಿಸುವ ಉದ್ದೇಶದಿಂದ, ಪಿಯುಸಿ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ನೃತ್ಯ, ಗೀತೆ, ಶ್ಲೋಕ ಪಠಣ, ವಾದ್ಯ, ವಾದನ ಹಾಗೂ ಭಾರತೀಯ ಪರಂಪರೆಯನ್ನು ಪ್ರತಿಬಿಂಬಿಸುವ ವಿವಿಧ ಕಲಾ ಪ್ರದರ್ಶನಗಳನ್ನು ಒಳಗೊಂಡಿರುವ “ಸಂಸ್ಕೃತ–ಸಂಸ್ಕೃತಿ ಉತ್ಸವ: ಎ ಕಲ್ಚರಲ್ ಶೋ” ಎಂಬ ವಿಶೇಷ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರತಿ ತಂಡದಲ್ಲಿ ಗರಿಷ್ಠ 10 ವಿದ್ಯಾರ್ಥಿಗಳು ಇರಲಿದ್ದಾರೆ. ಪ್ರತಿ ತಂಡಕ್ಕೆ 15 ನಿಮಿಷ ಪ್ರದರ್ಶನ ಸಮಯವನ್ನು ನೀಡಲಾಗುತ್ತದೆ. ಸ್ಪರ್ಧೆಯಲ್ಲಿ ವಿಜೇತರಾದ ಅತ್ಯುತ್ತಮ ತಂಡಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವನ್ನು ನೀಡಲಾಗುವುದು. ಹಾಗೂ, ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಲ್ಲಿನ ಸಂಸ್ಕೃತ ಭಾಷಾ ಅರಿವು ಮತ್ತು ಭಾರತೀಯ ಸಂಸ್ಕೃತಿಯ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಹಾಗೂ ಅಂತರರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶವನ್ನು ಒದಗಿಸಲು ಈ ಸಮ್ಮೇಳನವು ನೆರವಾಗಲಿದೆ.


ಸಮಾರೋಪ ಸಮಾರಂಭವು ಸಂಜೆ 4 ಗಂಟೆಗೆ ನಡೆಯಲಿದೆ. ನೇಪಾಳದ ತ್ರಿಭುವನ್ ವಿಶ್ವವಿದ್ಯಾಲಯದ ಮದನ್ ಭಂಡಾರಿ ಮೆಮೋರಿಯಲ್ ಕಾಲೇಜಿನ ಕ್ಯಾಂಪಸ್ ಸಹ-ಮುಖ್ಯಸ್ಥರಾದ ಡಾ. ತಾರಾ ಪ್ರಸಾದ್ ಗೌತಮ್ ಮತ್ತು ನೇಪಾಳದ ಮಧೇಶ ಪ್ರಾಂತ ಸರ್ಕಾರದ ಪ್ರಾಂತೀಯ ನೀತಿ ಮತ್ತು ಯೋಜನಾ ಆಯೋಗದ ಸದಸ್ಯರಾದ ಡಾ. ಶಿಹಾ ಮಿಶ್ರಾ ರವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.



ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ತುಳುನಾಡಿನ ಪುರಾತನ ವಸ್ತುಗಳು, ಗ್ರಾಮೀಣ ಸಾಮಗ್ರಿಗಳು, ಮತ್ತು ಪ್ರಾಚೀನ ನಾಣ್ಯ ಹಾಗೂ ನೋಟುಗಳ ಬೃಹತ್ ವೈಭವದ ವಸ್ತು ಪ್ರದರ್ಶನವನ್ನು ಕೂಡಾ ಆಯೋಜಿಸಲಾಗಿದೆ. 



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top