ಬೆಳ್ತಂಗಡಿ: "ಕಾಲೇಜಿನಲ್ಲಿ ಆಯೋಜಿಸಲಾದ ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಈಗ ಬಹುಮಾನವನ್ನು ಪಡೆಯುವ ಸಂಭ್ರಮ" ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ನಿವೃತ್ತ ಪ್ರಾಂಶುಪಾಲರಾದ ಶ್ರೀಯುತ ಚಂದ್ರಶೇಖರ್ ನುಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಯುತ ಮುರಳಿ ಬಲಿಪ ಇವರು ಪಾಲ್ಗೊಂಡು "ಎಲ್ಲಾ ಹಕ್ಕಿಗಳಿಗೂ ಆಹಾರ ಭಗವಂತ ಸೃಷ್ಟಿಸಿದ್ದಾನೆ ಆದರೆ ಅವು ಹುಡುಕಿಕೊಂಡು ಹೋಗಬೇಕು ಪ್ರಯತ್ನ ಬೇಕು" ಎಂದು ಕರೆ ನೀಡಿದರು. ನಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು.
ಶ್ರೀ ಪ್ರಭಾಕರ ಮಯ್ಯ, ಶ್ರೀ ಅಜಿತ್ ಆರಿಗ, ಶ್ರೀ ಮುನಿರಾಜ ಅಜ್ರಿ, ಶ್ರೀ ಮೋಹನ ಗೌಡ, ಕುಮಾರ ಭವಿತ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಅವರು ಸ್ವಾಗತಿಸಿ, ಶ್ರೀಮತಿ ಸವಿತಾ ವಂದಿಸಿದರು. ಶ್ರೀಮತಿ ಪವಿತ್ರ ಮತ್ತು ಶ್ರೀಮತಿ ಸುಕನ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಸಂತಿ ಪಿ. ವರದಿ ವಾಚಿಸಿದರು.
ಕಳೆದ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಎಂಟು ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದರ ನಿರ್ವಹಣೆಯನ್ನು ಶಿಲ್ಪಾಡಿ ನಿರ್ವಹಿಸಿದರು. ಕ್ರೀಡಾ ಸಾಧಕರಿಗೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾ ಪ್ರೇಮಿ ಹಾಗೂ ತರಬೇತುದಾರ ಶ್ರೀ ಅಜಿತ್ ಇವರನ್ನು ಸನ್ಮಾನಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




