ಮಕರ ಸಂಕ್ರಾಂತಿ: ಜ.15ರಂದು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಫರ್ಧೆಗಳು

Upayuktha
0


ತೆಂಕನಿಡಿಯೂರು: ಇಲ್ಲಿನ ಶ್ರೀ ಕಾಳಿಕಾಂಬಾ ಭಜನಾ ಸಂಘದ ವತಿಯಿಂದ ಜನವರಿ 15, 2026 ರಂದು ಗುರುವಾರ ಮಕರ ಸಂಕ್ರಾಂತಿ ಪ್ರಯುಕ್ತ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು ನಡೆಯಲಿವೆ.


ಹಿರಿಯ ಪ್ರಾಥಮಿಕ ಶಾಲೆಗಳ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗಾಗಿ ಭಕ್ತಿಗೀತೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಭಾವಗಾನ ಸ್ಪರ್ಧೆಗಳು ನಡೆಯಲಿದ್ದು, ಕಾಲೇಜು ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಹಾಗೂ ಭಾಷಣ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.


ಕಾಲೇಜು ವಿದ್ಯಾರ್ಥಿಗಳ ಭಾಷಣ ಸ್ಪರ್ಧೆಗೆ “21ನೇ ಶತಮಾನದಲ್ಲಿ ವಿಜ್ಞಾನ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ – ಸಾಧ್ಯತೆಗಳು ಮತ್ತು ಸವಾಲುಗಳು” ಎಂಬ ವಿಷಯವನ್ನು ನಿಗದಿಪಡಿಸಲಾಗಿದ್ದು, ಭಾಷಣಕ್ಕೆ 4+1 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.


ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ವಿದ್ಯಾರ್ಥಿಗಳು ಸ್ಪರ್ಧಾ ದಿನದಂದು ಬೆಳಿಗ್ಗೆ 9ರಿಂದ 9.30ರೊಳಗೆ ತಮ್ಮ ಶಾಲಾ ಅಥವಾ ಕಾಲೇಜು ಮುಖ್ಯಸ್ಥರ ದೃಢೀಕರಣದೊಂದಿಗೆ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬೇಕಾಗಿದೆ. ಪ್ರತಿ ಸ್ಪರ್ಧೆಗೆ ಒಂದು ಸಂಸ್ಥೆಯಿಂದ ಗರಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ರಸಪ್ರಶ್ನೆ ಸ್ಪರ್ಧೆಗೆ ಇಬ್ಬರು ವಿದ್ಯಾರ್ಥಿಗಳನ್ನೊಳಗೊಂಡ ಒಂದು ತಂಡಕ್ಕೆ ಅವಕಾಶ ನೀಡಲಾಗಿದೆ. ಚಿತ್ರಕಲಾ ಸ್ಪರ್ಧೆಯ ವಿಷಯವನ್ನು ಸ್ಥಳದಲ್ಲೇ ಘೋಷಿಸಲಾಗುವುದು.


ಸ್ಪರ್ಧಾ ವಿಜೇತರಿಗೆ ಅದೇ ದಿನ ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನಗದು ಬಹುಮಾನಗಳನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗೆ 9964024066 ಸಂಖ್ಯೆಯನ್ನು ಸಂಪರ್ಕಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top