ಶ್ರೀನಿವಾಸ ದೇವಸ್ಥಾನ ವೈಕುಂಠದಲ್ಲಿ ವೈಕುಂಠ ಏಕಾದಶಿ ವ್ರತಾಚರಣೆ

Upayuktha
0


ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಆಶ್ರಯದಲ್ಲಿ ವಳಚ್ಚಿಲ್‌ನಲ್ಲಿರುವ ಶ್ರೀನಿವಾಸ ದೇವಸ್ಥಾನ ವೈಕುಂಠದಲ್ಲಿ ಮಂಗಳವಾರ ಡಿಸೆಂಬರ್ 30, 2025ರಂದು ವೈಕುಂಠ ಏಕಾದಶಿ ಅಂಗವಾಗಿ ಶ್ರೀ ವ್ರತಾಚರಣೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.


ಬೆಳಿಗ್ಗೆ 8.45ರಿಂದ 9.00ರವರೆಗೆ ನಿತ್ಯ ಪೂಜೆ ನೆರವೇರಿಸಲಾಯಿತ್ತಲ್ಲದೆ, ಭಜನಾ ಸೇವೆ ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ ಶ್ರೀ ಶ್ರೀನಿವಾಸ ದೇವರಿಗೆ ಲಕ್ಷ ಪುಷ್ಪಾರ್ಚನೆ ಭಕ್ತಿಭಾವದಿಂದ ನಡೆಯಿತು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ. ಸಿಎ. ಎ. ರಾಘವೇಂದ್ರ ರಾವ್, ಗೌರವಾನ್ವಿತ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್, ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರಾದ ಎ. ವಿಜಯಲಕ್ಷ್ಮಿ ಆರ್. ರಾವ್ ಹಾಗೂ ಪ್ರೊ. ಇಆರ್. ಮಿತ್ರಾ ಎಸ್. ರಾವ್, ಶ್ರೀನಿವಾಸ ವಿವಿಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮದ ಪುಣ್ಯಫಲವನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ಶ್ರೀನಿವಾಸ ದೇವಸ್ಥಾನ ವೈಕುಂಠದ ಆಡಳಿತ ಮಂಡಳಿಯವರು ಯಶಸ್ವಿಯಾಗಿ ಆಯೋಜಿಸಿದ್ದರು.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top