ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತಟ್ರಸ್ಟ್ ವತಿಯಿಂದ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಇವರ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -11 ಕಾರ್ಯಕ್ರಮವು ಡಿಸೆಂಬರ್ 13 ರಂದು ಬೆಳಿಗ್ಗೆ 10.30 ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಕಾರ್ಕಳ ಎಸ್.ವಿ.ಎಜುಕೇಶನ್‍ಟ್ರಸ್ಟ್ ನ ಅಧ್ಯಕ್ಷ ಕೆ.ಪಿ.ಶೆಣೈ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲೆ ಪ್ರೊ. ಗೀತಾಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಆಶಯ ನುಡಿಗಳಾನ್ನಾಡಲಿದ್ದು, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪನ್ಯಾಸಕಿ ಶಾಲಿನಿ ಯು.ಬಿ “ಕಾರಂತರ ಕಾದಂಬರಿಗಳ ಸಿನೆಮಾಗಳಲ್ಲಿ ಬದುಕಿನ ಅಭಿವ್ಯಕ್ತಿ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


