ಉಡುಪಿ: ಪ್ರಜಾಪ್ರಭುತ್ವದ ಯಶಸ್ವಿವಿನ ಬೇರು ನಿಂತಿರುವುದೇ ಸ್ಥಳೀಯ ಆಡಳಿತ ಮೇಲೆ ಸ್ಥಳೀಯ ಆಡಳಿತ ಯಶಸ್ವಿಯಾಗಬೇಕಾದರೆ ಎಲ್ಲಾ ವಗ೯ದ ಜನರ ಸಹಭಾಗಿತ್ವ ಸಹಕಾರ ಅತೀ ಅಗತ್ಯ. ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗಾಗಿಯೇ ಹಕ್ಕುಗಳ ಅರಿವು ಮೂಡಿಸುವ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ ನಡೆಸುವುದು ಅತ್ಯಂತ ಔಚಿತ್ಯ ಪೂರ್ಣವಾದ ಮಾದರಿ ಕಾರ್ಯಕ್ರಮವೆಂದು ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು.
17ನೇ ಚೇರ್ಕಾಡಿ ಗ್ರಾಮಪಂಚಾಯತ್ ವತಿಯಿಂದ ಶ್ರೀ ಶಾರದಾ ಹೈಸ್ಕೂಲಿನ ಪರಿಸರದಲ್ಲಿ ನಡೆದ ಮಕ್ಕಳ ಹಕ್ಕುಗಳ ವಿಶೇಷ ಅಧಿವೇಶನದಲ್ಲಿ ಸಂಪನ್ಮೂಲ ಉಪನ್ಯಾಸವಿತ್ತು ಮಾತನಾಡಿದರು.
ಸಮಾರಂಭದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾರಾಯಣ ನಾಯ್ಕ, ಉಪಾಧ್ಯಕ್ಷೆ ಪ್ರತಿಮಾ ಸುರೇಶ್, ಪೂರ್ಣಿಮಾ ಎಂ.ಎಸ್, ಅಂಗನವಾಡಿ ಮೇಲ್ವಿಚಾರಕಿ ಶಿಶು ಅಭಿವೃದ್ಧಿ ಯೇೂಜನಾಧಿಕಾರಿ ಕಛೇರಿ ಬ್ರಹ್ಮಾವರ, ಶ್ರೀನಾಥ್ ಮಾರ್ಗದರ್ಶಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿತಾ, ಕಾರ್ಯದರ್ಶಿ ಉದಯ ಶೆಟ್ಟಿ, ಶ್ರೀ ಶಾರದಾ ಹೈಸ್ಕೂಲು ಮುಖ್ಯಸ್ಥ ಮಂಜುನಾಥ್ ನಾಯ್ಕ, ಗ್ರಾಮ ಪಂಚಾಯತ್ ಸದಸ್ಯರು, ಪೊಲೀಸ್ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಪೇೂಷಕರು, ಶಿಕ್ಷಕರು ಭಾಗವಹಿಸಿದ್ದರು.
ಪಂಚಾಯತ್ ಹಿರಿಯ ಸದಸ್ಯ ಚೇರ್ಕಾಡಿ ಹರೀಶ್ ಶೆಟ್ಟಿ ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳೆ ಸಂಪೂರ್ಣವಾಗಿ ಕಾರ್ಯಕ್ರಮ ನಡೆಸಿಕೊಟ್ಟರು. ಅನಂತರದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉಪಸ್ಥಿತರಿದ್ದ ಅಧಿಕಾರಿಗಳು ಉತ್ತರ ನೀಡಿದರು. ವಿದ್ಯಾರ್ಥಿಗಳಿಂದಲೇ ವಿದ್ಯಾರ್ಥಿಗಳಿಗಾಗಿ ನಡೆದ ಗ್ರಾಮ ಸಭೆ ಒಂದು ಮಾದರಿ ಕಾರ್ಯಕ್ರಮವಾಗಿ ಮೂಡಿಬಂತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


