ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜು ಪುತ್ತೂರು, ಇಲ್ಲಿನ ದ್ವಿತೀಯ ಬಿಎ ವಿದ್ಯಾರ್ಥಿನಿ ಕು . ಕೀರ್ತಿಲತಾ ಇವರು ಕರ್ನಾಟಕ ಜೂನಿಯರ್ ತ್ರೋಬಾಲ್ ತಂಡಕ್ಕೆ ಆಯ್ಕೆಯಾಗಿರುತ್ತಾರೆ. ಇದೇ ಬರುವ ಡಿಸೆಂಬರ್ 5 ರಿಂದ 7ರವರೆಗೆ , ಮಹಾರಾಷ್ಟ್ರದ ಬದ್ಲಾಪುರ ದಲ್ಲಿ ನಡೆಯಲಿರುವ 35ನೇ ರಾಷ್ಟ್ರೀಯ ಮಟ್ಟದ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ.
ಇವರು ಮಡಿಕೇರಿ ತಾಲೂಕಿನ ಬಂಗಾರ ಕೋಡಿಯ ದಿ. ಲಕ್ಷ್ಮಣ ಬಿ ಆರ್ ಮತ್ತು ವಿಧಾ ಕುಮಾರಿಯವರ ಮಗಳು. ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪ್ರಾಧ್ಯಾಪಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್ ವಿ.ಎಸ್ ಹಾಗೂ ಯತೀಶ್ ಕುಮಾರ್ ಬಾರ್ತಿಕುಮೇರ್ ತರಬೇತಿಯನ್ನು ನೀಡಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




