ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಸಮಾರೋಪ

Upayuktha
0


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ನಡೆಸಲ್ಪಡುವ ಸರ್ಟಿಫಿಕೇಟ್ ಕೋರ್ಸ್ ಹಾಗೂ ವಾಣಿಜ್ಯ ಸಂಘದ ಸಮಾರೋಪ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥರಾದ ಭವ್ಯ ಪಿ ಆರ್ ನಿಡ್ಪಳ್ಳಿ ಆಗಮಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ,  "ಶಿಕ್ಷಣ ಮತ್ತು ವ್ಯಕ್ತಿತ್ವ ಒಂದಕ್ಕೊಂದು ಪೂರಕವಾಗಿದ್ದು, ಶಿಕ್ಷಣವು ಜ್ಞಾನ ನೀಡುವುದರ ಜೊತೆಗೆ ವ್ಯಕ್ತಿಯ ನಡವಳಿಕೆ, ನೈತಿಕತೆ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ರೂಪಿಸಿ, ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಅಡಿಪಾಯ ಹಾಕುತ್ತದೆ. ಉತ್ತಮ ಶಿಕ್ಷಣವು ವೃತ್ತಿಜೀವನದಲ್ಲಿ ಯಶಸ್ಸು ಮತ್ತು ಜೀವನದಲ್ಲಿ ಸಮತೋಲನವನ್ನು ತರಲು ಅತ್ಯಗತ್ಯ. ಶಿಕ್ಷಣ ಪಡೆಯುವುದು ಎಂದರೆ ನಮ್ಮ ವ್ಯಕ್ತಿತ್ವವನ್ನು ಉನ್ನತೀಕರಿಸುವುದು. ಒಬ್ಬರ ವ್ಯಕ್ತಿತ್ವ ವಿಕಸನವು ಶಿಕ್ಷಣದಷ್ಟೇ ಮುಖ್ಯವಾಗಿದೆ. ಶಿಕ್ಷಣವು ವ್ಯಕ್ತಿಯೊಳಗಿನ ಶಕ್ತಿಯನ್ನು ಜಾಗೃತಗೊಳಿಸಿ, ಪರಿಪೂರ್ಣತೆಗೆ ಅಡಿಪಾಯ ಹಾಕುತ್ತದೆ" ಎಂದರು.

ಬಳಿಕ ವಾಣಿಜ್ಯ ಸಂಘದ ವತಿಯಿಂದ ನಡೆಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಾಣಿಜ್ಯ ವಿಭಾಗವುಆಸಕ್ತ ವಿದ್ಯಾರ್ಥಿಗಳಿಗಾಗಿ ಸ್ಟಾಕ್ ಮಾರ್ಕೆಟ್ ಹಾಗೂ ಟ್ಯಾಲಿ ಮುಂತಾದ ಸರ್ಟಿಫಿಕೇಟ್ ಕೋರ್ಸ್ ಗಳನ್ನು ನಡೆಸಿಕೊಂಡು ಬಂದಿದ್ದು ಅದರಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ವಹಿಸಿದರು.  ವಾಣಿಜ್ಯ ವಿಭಾಗದ ಮುಖ್ಯಸ್ಥ ದೇವಿಪ್ರಸಾದ್ ವಿದ್ಯಾರ್ಥಿಗಳೊಂದಿಗೆ ವ್ಯಕ್ತಿತ್ವ ವಿಕಸನದ ಕುರಿತಾದ ಕೆಲವೊಂದು ವಿಷಯಗಳನ್ನು ಹಂಚಿಕೊಂಡರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿನ್ಸನ್ ಸ್ವಾಗತಿಸಿ , ದೀಪಕ್‍ ಗುಜಾರ್ ವಂದಿಸಿದರು.  ವಿದ್ಯಾರ್ಥಿನಿ ವೈಶಾಲಿ  ಕಾರ್ಯಕ್ರಮ ನಿರೂಪಿಸಿದರು. 



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top