ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದವರು ಯಾರು? ಸಮಗ್ರ ತನಿಖೆಗೆ ಎಸ್ಐಟಿ ರಚಿಸಿ: ಶಾಸಕ ಡಾ. ಭರತ್ ಶೆಟ್ಟಿ

Upayuktha
0


ಮಂಗಳೂರು: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದವರ ಬಗ್ಗೆ ಸಮಗ್ರ ತನಿಖೆಗೆ ಎಸ್‌ಐಟಿ ರಚಿಸಬೇಕೆಂದುಿ ಮಂಗಳೂರು ಉತ್ತರದ ಶಾಸಕ ಡಾ. ಭರತ್ ಶೆಟ್ಟಿ ಆಗ್ರಹಿಸಿದರು.


ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರು ಯಾರು? ಅವರು ಅಲ್ಲಿಗೆ ಬಂದು ನೆಲೆಸಲು ಅವಕಾಶ ಕೊಟ್ಟಿದ್ದು ಯಾರು, ಅವರು ಬಂದಿದ್ದು ಏಕೆ? ಅವರು ಬಂದಿದ್ದು ಎಲ್ಲಿಂದ ಎಂಬ ಬಗ್ಗೆ ಸಮಗ್ರ ತನಿಖೆಯಾಗಬೇಕು. ಇದಕ್ಕಾಗಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು’ ಎಂದರು.


‘ಅಲ್ಲಿ ಒಕ್ಕಲೆಬ್ಬಿಸಿದವರಿಂದ ಯಾವುದೇ ದಾಖಲೆ ಪತ್ರವನ್ನು ಕೇಳದೆಯೇ ಅವರಿಗೆ ನಾಲ್ಕೈದು ಕಿ.ಮೀ ದೂರದಲ್ಲಿ ಪುನರ್ವಸತಿ ಕಲ್ಪಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಈ ಬೆಳವಣಿಗೆಗಳ ಹಿಂದೆ ವಸತಿ ಸಚಿವ ಜಮೀರ್ ಅಹಮದ್ ಖಾನ್‌ ಕೈವಾಡ ಇದೆ’ ಎಂದು ಅವರು ಆರೋಪಿಸಿದರು.


ಅಕ್ರಮ ವಲಸಿಗರಿಗೆ ವಸತಿ ಕಲ್ಪಿಸುವುದರ ಹಿಂದೆ ಕೇರಳದ ರಾಜಕೀಯ ಒತ್ತಡ ಕೆಲಸ ಮಾಡಿದೆ.ಎರಡೂವರೆ ವರ್ಷದಲ್ಲಿ ರಾಜ್ಯದ ಬಡವರಿಗೆ ಸರ್ಕಾರ ಒಂದೇ ಒಂದು ಮನೆ ಕೊಟ್ಟಿಲ್ಲ. ನಗರದಲ್ಲಿ ವಸತಿ ಜಮೀನಿಗಾಗಿ ನಮೂನೆ 94 ಸಿ ಮತ್ತು 94 ಸಿ.ಸಿ ಅಡಿ ಅರ್ಜಿ ಸಲ್ಲಿಸಲಿಕ್ಕೂ ಅವಕಾಶ ಕಲ್ಪಿಸಿಲ್ಲ. ನಮ್ಮ ರಾಜ್ಯದವರ ಪರಿಸ್ಥಿತಿ ಹೀಗಿರುವಾಗ ಹೊರರಾಜ್ಯದ ಅಕ್ರಮ ವಲಸಿಗರಿಗೆ ಮನೆ ಕಟ್ಟಿಕೊಡುವ ಔಚಿತ್ಯವಾದರೂ ಏನು’ ಎಂದು ಅವರು ಪ್ರಶ್ನಿಸಿದರು.



‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಅವರ ಜಮೀನನ್ನು ನಾವು ಹೋಗಿ ಒತ್ತುವರಿ ಮಾಡಿದರೆ, ನಮಗೆ ಅಲ್ಲಿ ಮನೆ ಕಟ್ಟಿಸಿ ಕೊಡುತ್ತಾರೆಯೇ?. ಮುಸ್ಲಿಮರ ಮತಕ್ಕಾಗಿ ಈ ರೀತಿ ಮಾಡುವುದು ಸರಿಯಲ್ಲ. ಎಲ್ಲೆಲ್ಲಿಂದ ಬಂದು ಅಕ್ರಮವಾಗಿ ನೆಲೆಸಿದವರಿಗೆ ಮನೆ ಕಟ್ಟಿಕೊಡುವ ಸರ್ಕಾರ ರಾಜ್ಯದಲ್ಲೇ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿ ಕೊಟ್ಟಿಲ್ಲ. ಕೇರಳದಲ್ಲಿ ಕಾಡಾನೆ ದಾಳಿಗೊಳಗಾದರೂ ನಮ್ಮ ರಾಜ್ಯದಿಂದ ಪರಿಹಾರ ನೀಡಲಾಗುತ್ತದೆ. ರಾಜ್ಯದ ಜನತೆ ಕ್ಷಮಿಸಲಾಗದ ಅನ್ಯಾಯವನ್ನು ಸರ್ಕಾರ ಮಾಡುತ್ತಿದೆ’ ಎಂದು ಟೀಕಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top