ಸುರತ್ಕಲ್: ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಮಧ್ಯ ಸುರತ್ಕಲ್‌ನಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಪರೀಕ್ಷೆಯ ತಯಾರಿ ಮತ್ತು ಉನ್ನತ ಕಲಿಕೆಯ ಅವಕಾಶಗಳ ಕುರಿತು ಕಾರ್ಯಾಗಾರ ನಡೆಯಿತು.
ಮಾನವ ಸಂಪನ್ಮೂಲ ಅಧಿಕಾರಿ ಯೋಗಿತಾ ಕೆ. ಅವರು ಮಾತನಾಡಿ, ನಿರ್ದಿಷ್ಟ ಯೋಜಿತ ಗುರಿ, ಕ್ರಮಬದ್ಧ ಅಧ್ಯಯನ ವೇಳಾಪಟ್ಟಿ, ತಂತ್ರ ಜ್ಞಾನದ ಸರಿಯಾದ ಬಳಕೆಯ ಮೂಲಕ ಪರೀಕ್ಷೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು ಸಾಧ್ಯ ಎಂದರು.
ಗ್ರಂಥಾಲಯದ ಸಹಾಯ ಪಡೆಯುವುದರೊಂದಿಗೆ ಉತ್ತಮ ಬರವಣಿಗೆಯ ಶೈಲಿಯನ್ನು ರೂಢಿಸಿಕೊಳ್ಳುವ ಅಗತ್ಯ ಇದೆ. ನೀಡಿರುವ ಸಮಯದ ಅವಧಿಯಲ್ಲಿ ಉತ್ತಮವಾಗಿ ಉತ್ತರಿಸಿದರೆ ಉತ್ತಮ ಸ್ಥಾನ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸುರತ್ಕಲ್ ರೋಟರಿಯ ಸೇವಾ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಉನ್ನತ ಶಿಕ್ಷಣದ ಅವಕಾಶಗಳನ್ನು ಅರಿತು ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಕಲಿಯುವ ಸಾಧ್ಯತೆಗಳನ್ನು ತಿಳಿದುಕೊಳ್ಳುವ ಅವಶ್ಯಕತೆ ಇದೆ ಎಂದರು.
ಸುರತ್ಕಲ್ ರೋಟರಿಯ ನಿಯೋಜಿತ ಅಧ್ಯಕ್ಷ ಶ್ರೀಧರ್ ಟಿ. ಎನ್. ಪ್ರೌಢ ಶಾಲೆಯ ಹಂತದಲ್ಲಿಯೇ ಉತ್ತಮ ಕಲಿಕೆಯ ಮೂಲಕ ಉತ್ತಮ ಸಾಧನೆಯ ಹಂತವನ್ನು ತಲುಪಬೇಕು ಎಂದರು. ಶಿಕ್ಷಕಿ ಸುನಂದಾ ಕಾರ್ಯಕ್ರಮ ಸಂಯೋಜಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



