ವಿಶ್ವ ಏಡ್ಸ್ ದಿನ: ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಎನ್ ಎಸ್ ಎಸ್ ಘಟಕದ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಉಪನ್ಯಾಸ ನಡೆಯಿತು.


ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮತ್ತು ವೈದ್ಯಕೀಯ ಅಧೀಕ್ಷಕಿಯಾದ ಡಾ. ಪ್ರಕೃತಿ ರವರು ಎಚ್ಐವಿ ಸೋಂಕಿನ ಲಕ್ಷಣಗಳು, ತಡೆಗಟ್ಟುವ ಕ್ರಮಗಳು, ಸುರಕ್ಷಾ ಕ್ರಮಗಳು, ಸೋಂಕಿನ ತಡೆಗಟ್ಟುವಿಕೆಗೆ ಸರಕಾರದ ಯೋಜನೆಗಳು ಮುಂತಾದ ವಿಷಯದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಬಗ್ಗೆ ಉಪನ್ಯಾಸ ನೀಡಿದರು. ಕಾಲೇಜಿನ ಉಪಪ್ರಾಂಶುಪಾಲರಾದ ರಾಜೇಶ್ ಬಿ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹಯೋಜನಾಧಿಕಾರಿ  ಶೋಭಾ ಪಿ, ಎನ್ಎಸ್ಎಸ್ ನಾಯಕ ಸಂಕೇತ್, ನಾಯಕಿ ರಾಶಿಕ ಉಪಸ್ಥಿತರಿದ್ದರು.


ಸ್ವಯಂ ಸೇವಕಿ ಸುಪೇಕ್ಷಾ ಸ್ವಾಗತಿಸಿ, ಪಲ್ಲವಿ ವಂದಿಸಿದರು. ಧನ್ಯ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top