ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಜಿಲ್ಲಾ ಕರಾವಳಿ ಉತ್ಸವ- 2025 ಅಂಗವಾಗಿ ಇತ್ತೀಚೆಗೆ ದಕ್ಷಿಣೋತ್ತರ ಕನ್ನಡ ಜಿಲ್ಲೆಗಳ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಜರಗಿತು. ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ನೇತೃತ್ವದ ಆಕಾಶವಾಣಿ ಮತ್ತು ದೂರದರ್ಶನ ಖ್ಯಾತಿಯ ಕರ್ನಾಟಕ ಯಕ್ಷ ಭಾರತಿ ಪುತ್ತೂರು ತಂಡವು ಕರಾವಳಿ ಉತ್ಸವದ ವಸ್ತು ಪ್ರದರ್ಶನ ವೇದಿಕೆಯಲ್ಲಿ 'ವೀರಮಣಿ ಕಾಳಗ' ಪ್ರಸಂಗವನ್ನು ಪ್ರಸ್ತುತಪಡಿಸಿತು.
ಯಕ್ಷಗಾನ ರಂಗದ ಪ್ರಮುಖ ಅರ್ಥಧಾರಿಗಳಾದ ಡಾ. ಎಂ. ಪ್ರಭಾಕರ ಜೋಶಿ, ಭಾಸ್ಕರ ರೈ ಕುಕ್ಕುವಳ್ಳಿ, ಜಬ್ಬಾರ್ ಸಮೋ ಸಂಪಾಜೆ ಮತ್ತು ಪ್ರಸಾದ ಪೂಜಾರಿ ಭಟ್ಕಳ ವಿವಿಧ ಪಾತ್ರಗಳನ್ನು ನಿರ್ವಹಿಸಿದರು. ಭಾಗವತ ಹರೀಶ ಶೆಟ್ಟಿ ಸೂಡ ಅವರ ಹಾಡುಗಾರಿಕೆಗೆ ವಿಕಾಸ್ ರಾವ್ ಕೆರೆಕಾಡ್, ಶ್ರೀಶ ರಾವ್ ನಿಡ್ಲೆ ಮತ್ತು ಕೀರ್ತನ್ ಹಿಮ್ಮೇಳದಲ್ಲಿ ಸಹಕರಿಸಿದರು.
ಜಿಲ್ಲಾಡಳಿತದ ಪರವಾಗಿ ದ.ಕ.ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಅವರು ಕರ್ನಾಟಕ ಯಕ್ಷ ಭಾರತಿಯ ಸಂಚಾಲಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರಿಗೆ ಸ್ಮರಣಿಕೆಯಿತ್ತು ಗೌರವಿಸಿದರು. ಈ ಸಂದರ್ಭದಲ್ಲಿ ಸಾಂಸ್ಕೃತಿಕ ಸಮಿತಿಯ ಮಂಜುನಾಥ ನಿಸರ್ಗ, ಉಮೇಶ ಕೆ.ಆರ್., ಡಾ. ಮಂಜುಳಾ ಶೆಟ್ಟಿ ಉಪಸ್ಥಿತರಿದ್ದರು. ಡಾ. ಸಂತೋಷ್ ಆಳ್ವ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

