ಸುಜ್ಞಾನ ಪಿಯು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Upayuktha
0

ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೇದಿಕೆ: ಕೊಡ್ಗಿ




ಕುಂದಾಪುರ: "ಮಕ್ಕಳು ಕೇವಲ ಓದು ಮತ್ತು ಅಂಕಗಳು ಎಂದು ಕಳೆದುಹೋಗದೇ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮದಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು. ಮಕ್ಕಳ ತಮ್ಮ ಪ್ರತಿಭೆಯನ್ನು ಹೊರಹಾಕಲು ಇದೊಂದು ಅತ್ಯುತ್ತಮ  ವೇದಿಕೆಯಾಗಿದೆ" ಎಂದು ಶಾಸಕ ಎ. ಕಿರಣ್ ಕುಮಾರ್‌ ಕೊಡ್ಗಿ ಅವರು ಹೇಳಿದರು.


ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ-ಮತ್ಯಾಡಿಯ ಸಹಭಾಗಿತ್ವದಲ್ಲಿ ಇತ್ತೀಚೆಗೆ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಅಧ್ಯಕ್ಷತೆ ವಹಿಸಿ  ಅವರು ಮಾತನಾಡಿದರು.


ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡುತ್ತಾ, "ಹಿಂದೆ ಪ್ರತಿಭೆ ಇದ್ದರೂ ಅವಕಾಶಗಳು ಸಿಗುತ್ತಿರಲಿಲ್ಲ. ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ತೋರಲು ಒಂದು ಅತ್ಯುತ್ತಮ ವೇದಿಕೆಯಾಗಿದೆ. ಇದನ್ನು ಮಕ್ಕಳು ಸಮರ್ಪಕವಾಗಿ ಬಳಸಿಕೊಳ್ಳಬೇಕು.ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವಿಕೆ ತುಂಬಾ ಮುಖ್ಯ”  ಎಂದು ಅವರು ಹೇಳಿದರು.


ಈ ಸಂದರ್ಭದಲ್ಲಿ ಮಾತನಾಡಿದ ಕುಂದಾಪುರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಅವರು, "ಪ್ರತಿಭಾ ಕಾರಂಜಿಯು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಾಯಕಾರಿಯಾಗಿದ್ದು, ಅವರ ಪ್ರತಿಭೆಯನ್ನು ಪ್ರದರ್ಶಿಸುವುದಕ್ಕೆ ಇದೊಂದು ಉತ್ತಮ ವೇದಿಕೆ," ಎಂದು ಅಭಿಪ್ರಾಯಪಟ್ಟರು.


ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶೋಭಾ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ ನ ಖಜಾಂಚಿ ಭರತ್ ಶೆಟ್ಟಿ, ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ, ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿ.ಅರುಣ್ ಕುಮಾರ್ ಹೆಗ್ಡೆ, ಕುಂದಾಪುರ ವಲಯದ ಕ್ಷೇತ್ರ ಸಮನ್ವಯಧಿಕಾರಿ ಅಶೋಕ್ ನಾಯ್ಕ್, ಅಕ್ಷರದಾಸೋಹ ಕುಂದಾಪುರದ ಸಹಾಯಕ ನಿರ್ದೇಶಕ ಚಂದ್ರ ನಾಯ್ಕ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಕುಂದಾಪುರ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕುಂದಾಪುರ ವಲಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಅನುದಾನಿತ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಕುಂದಾಪುರ ವಲಯ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಸಹಾಯಕ ಯೋಜನಾ ಸಮನ್ವಯ ಅಧಿಕಾರಿ ಮತ್ತು ಜಿಲ್ಲಾ ನೋಡಲ್ ಜ್ಯೋತಿ ಬಿ., ಮತ್ತು ತಾಲೂಕು ನೊಡೆಲ್ ಶೇಖರ್ ಯು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


ಶಿಕ್ಷಕ ರಜತ್ ಭಟ್ ಸ್ವಾಗತಿಸಿದರೆ, ಬಿಆರ್ ಪಿ ಸಂತೋಷ್ ಕುಮಾರ್ ಶೆಟ್ಟಿ ಅವರು  ನಿರೂಪಿಸಿದರು. ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top