ನಿಟ್ಟೆಯಲ್ಲಿ ಸಂಭ್ರಮದ ಹಳೆವಿದ್ಯಾರ್ಥಿಗಳ ಪುನರ್ಮಿಲನ

Upayuktha
0


ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ 1996 ರಲ್ಲಿ ಪ್ರವೇಶ ಪಡೆದ ಎನ್ಎಂಎಎಂಐಟಿಯ ಹಳೆಯ ವಿದ್ಯಾರ್ಥಿಗಳ ಸಿಲ್ವರ್ ರಿಯೂನಿಯನ್ ನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವಾದ "ವೆನಮಿತಾ" ಡಿ.20 ರಂದು ನಿಟ್ಟೆಯ ಸಂಭ್ರಮ್ ಸಭಾಂಗಣದಲ್ಲಿ ಹಮ್ಮಿಕೊಂಡಿತು.


ಕಾರ್ಯಕ್ರಮವನ್ನು ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಕುಲಾಧಿಪತಿ ಎನ್.ವಿನಯ ಹೆಗ್ಡೆ ಉದ್ಘಾಟಿಸಿದರು. ನಿಟ್ಟೆ ಕ್ಯಾಂಪಸ್ ನ್ನು ಅವರು ಎಷ್ಟು  ಭಾವನಾತ್ಮಕವಾಗಿ ಹಚ್ಚಿಕೊಂಡಿರುವರು ಎಂದು ವ್ಯಕ್ತಪಡಿಸಿ, ಸಂಸ್ಥೆಯ ಬೆಳವಣಿಗೆಯ ಬಗ್ಗೆ ನೆನಪಿಸಿಕೊಂಡು, ಸಂಸ್ಥೆಯ ಯಶಸ್ಸಿನಲ್ಲಿ ಶ್ರಮಿಸಿದ ವಿವಿಧ ನಿವೃತ್ತ ಪ್ರಾಧ್ಯಾಪಕರ ಹಾಗೂ ಹಳೆಯ ವಿದ್ಯಾರ್ಥಿಗಳ ನಿರ್ಣಾಯಕ ಪಾತ್ರವನ್ನು ವಿವರಿಸಿದರು.


ನಿಟ್ಟೆ ತಾಂತ್ರಿಕ ಕಾಲೇಜಿನ ಪ್ಲೇಸ್ಮೆಂಟ್ ಕೌನ್ಸೆಲಿಂಗ್ ವಿಭಾಗದ ನಿವೃತ್ತ ಮುಖ್ಯಸ್ಥೆ ಪ್ರೊ.ಶಾಲಿನಿ ಕೆ.ಶರ್ಮಾ ಅವರು ಗೌರವ ಅತಿಥಿಯಾಗಿ ಭಾಗವಹಿಸಿ ಅವರ ವೃತ್ತಿಜೀವನದ ಅನುಭವ ಹಾಗೂ ವಿದ್ಯಾರ್ಥಿ ಬದುಕಿನ ಬಗೆಗೆ ವಿವರಿಸಿದರು.


ನಿಟ್ಟೆ ಸಂಸ್ಥೆಯ ಉಪಾಧ್ಯಕ್ಷ ಡಾ.ಗೋಪಾಲ್ ಮುಗೇರಾಯ ಅವರು ಪ್ರೇರಕ ಭಾಷಣ ಮಾಡಿ, ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ ಎಂದು ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವೆನಮಿತಾದ ಅಧ್ಯಕ್ಷ ಮುಲ್ಕಿ ಜೀವನ್ ಕೆ.ಶೆಟ್ಟಿ ಅವರು ತಮ್ಮ ಭಾಷಣದಲ್ಲಿ, ಪ್ರಸ್ತುತ ವಿದ್ಯಾರ್ಥಿಗಳನ್ನು ಅವರ ಶೈಕ್ಷಣಿಕ ಮತ್ತು ವೃತ್ತಿಜೀವನದ ಅನ್ವೇಷಣೆಗಳಲ್ಲಿ ಬೆಂಬಲಿಸುವ ಹಳೆಯ ವಿದ್ಯಾರ್ಥಿಗಳ ಸಂಘದ ಬದ್ಧತೆಯನ್ನು ವ್ಯಕ್ತಪಡಿಸಿದರು. ಹಳೆವಿದ್ಯಾರ್ಥಿ ಸಂಘವು ಮುಂದಿನ ದಿನಗಳಲ್ಲಿ ಇನ್ನೂ ಸಕ್ರಿಯ ಕಾರ್ಯನಿರ್ವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಈ ಕಾರ್ಯಕ್ರಮದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ 25 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಹಾಗೂ ನಿವೃತ್ತರಾದ ಎನ್ಎಂಎಎಂಐಟಿ ಬೋಧಕರು ಮತ್ತು ಸಿಬ್ಬಂದಿ ಗಳನ್ನು ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಲ್ಯೂಮ್ನೈ ವಿಭಾಗದ ನಿರ್ದೇಶಕ ಪ್ರೊ. ಪ್ರಸನ್ನ ಕೈಲಾಜೆ ಹಾಗೂ ನಿಟ್ಟೆ ತಾಂತ್ರಿಕ ಕಾಲೇಜಿನ ಅಲ್ಯೂಮ್ನೈ ಕಾರ್ಡಿನೇಟರ್ ಡಾ. ಗ್ರೈನಲ್ ಡಿಮೆಲ್ಲೊ ಉಪಸ್ಥಿತರಿದ್ದರು.


ಎನ್ಎಂಎಎಂಐಟಿಯ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಪಯಣದಲ್ಲಿ ಹಳೆಯ ವಿದ್ಯಾರ್ಥಿಗಳ ಮಹತ್ವವನ್ನು ಹೇಳಿದರು. ಸುನಿಲ್ ಒಸ್ವಾಲ್ಡ್ (1996 ಬ್ಯಾಚ್) ವಿದ್ಯಾರ್ಥಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ವೆನಮಿತಾ ಉಪಾಧ್ಯಕ್ಷ ಅವಿನಾಶ್ ಕೃಷ್ಣ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ರಂಜಿತ್ ಭಟ್ ವಂದಿಸಿದರು. ಕಾರ್ಯಕ್ರಮವನ್ನು ವೆನಾಮಿಟಾದ ಖಜಾಂಚಿ ಡಾ. ಹರ್ಷಿತಾ ನಿರೂಪಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top