ದಾವಣಗೆರೆ: ದಾವಣಗೆರೆಯ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕಲಾಕುಂಚ ವಿದ್ಯಾನಗರ ಶಾಖೆಯ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ಮಕ್ಕಳಿಗೆ ಡಿಸೆಂಬರ್ 28 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿದ್ಯಾನಗರ ರಸ್ತೆಯಲ್ಲಿರುವ ಕುವೆಂಪು ಕನ್ನಡ ಭವನದಲ್ಲಿ ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ. ವಾಮದೇವಪ್ಪ ತಿಳಿಸಿದ್ದಾರೆ.
ಈ ಬಾರಿ ದಾವಣಗೆರೆ ಜಿಲ್ಲೆಗೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಥಮ ಸ್ಥಾನಕ್ಕೆ ಬರುವ ಮಕ್ಕಳ ಭವ್ಯ ದಿವ್ಯ ಪ್ರಜ್ವಲ ಭವಿಷ್ಯದ ಸದುದ್ದೇಶದಿಂದ ಮಕ್ಕಳಿಗೆ ಪರೀಕ್ಷೆ ಭಯ ದೂರ ಮಾಡುವ ಉತ್ತಮ ಫಲಿತಾಂಶದೊಂದಿಗೆ ವ್ಯಾಸಂಗ ಮಾಡಿದ ವಿದ್ಯಾಸಂಸ್ಥೆಗೆ, ಹೆತ್ತ ತಂದೆ-ತಾಯಿಗಳಿಗೆ ಹುಟ್ಟಿದ ಊರಿಗೆ ಒಳ್ಳೆಯ ಹೆಸರು ತರಬೇಕಾದ ಅವಶ್ಯಕತೆ ಇರಬೇಕಾಗಿದೆ ಎಂದು ಕಾರ್ಯಾಗಾರ ನಡೆಸುವ ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ಪ್ರಕಟಿಸಿದ್ದಾರೆ.
ಈ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಪೋಷಕರು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉಚಿತ ಕಾರ್ಯಾಗಾರ ಯಶಸ್ವಿಗೊಳಿಸಬೇಕಾಗಿ ಕಲಾಕುಂಚದ ವಿದ್ಯಾನಗರ ಶಾಖೆಯ ಅಧ್ಯಕ್ಷರಾದ ರಾಜಶೇಖರ್ ಬೆನ್ನೂರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9448423683, 9538732777 ಈ ಸನೀಹವಾಣಿಗಳಿಗೆ ಸಂಪರ್ಕಿಸಬಹುದು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


