ಬಳ್ಳಾರಿ: ಕರ್ನಾಟಕ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಇಂದು ಜರುಗಿತು.
ಈ ಕಾರ್ಯಕ್ರಮವನ್ನು ಬಳ್ಳಾರಿ ನಗರ ಶಾಸಕ ನಾರಾ ಭಾರತ್‌ರೆಡ್ಡಿ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ಸಮಾಜದ ಕಣ್ಣುಕಿವಿಯಾಗಿದ್ದು, ಅಭಿವೃದ್ದಿ ಕಾರ್ಯಗಳ ಬಗ್ಗೆ ಜನರಿಗೆ ಪಾರದರ್ಶಕ ಮಾಹಿತಿ ನೀಡುವಲ್ಲಿ ಪತ್ರಿಕಾ ವಲಯದ ಪಾತ್ರ ಅತ್ಯಂತ ಮಹತ್ವದ್ದೆಂದು ಹೇಳಿದರು.
ಪತ್ರಿಕಾ ವಲಯದ ಬಲ, ಜವಾಬ್ದಾರಿ ಮತ್ತು ಭವಿಷ್ಯದ ಕಾರ್ಯಯೋಜನೆಗಳ ಕುರಿತು ಮಾತನಾಡಿದ ಅತಿಥಿಗಳು, ಹೊಸ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಪತ್ರಕರ್ತರು ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಂತು ಜನರ ಧ್ವನಿಯನ್ನು ಸರ್ಕಾರಕ್ಕೆ ತಲುಪಿಸುವಲ್ಲಿ ಇನ್ನಷ್ಟು ಬಲವಾಗಬೇಕು ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘ (ರಿ)ದ ಜಿಲ್ಲಾ ಘಟಕದ ಅಧ್ಯಕ್ಷ ಯಾಳಿ ವಲಿಭಾಷಾರವರು ಪದಗ್ರಹಣ ಸ್ವೀಕರಿಸಿದರು. ಕಾರ್ಯಕ್ರಮಕ್ಕೆ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮರುಗೇಶ್ ಬಿ.ಶಿವಪೂಜಿ, ಬಳ್ಳಾರಿ - ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ, ಉಪ ಮಹಾಪೌರರಾದ ಮುಬೀನಾ, ಮಾಜಿ ಮಹಾಪೌರರಾದ - ಎಂ. ರಾಜೇಶ್ವರಿ ಸುಬ್ಬರಾಯುಡು, ಗ್ಯಾರಂಟಿಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ, ಕನ್ನಡ ಸಾಹಿತ್ಯ ಪರಿಷತ್‌ನ ಅಖಂಡ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಡಾ|| ನಿಷ್ಠಿ ರುದ್ರಪ್ಪ, ಹಾಗೂ ಮಹಾನಗರ ಪಾಲಿಕೆಯ ಸದಸ್ಯರಾದ ವಿವೇಕ್ (ವಿಕ್ಕಿ), ಕುಬೇರ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘ (ರಿ)ದ ಬಳ್ಳಾರಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರುಗಳು ಭಾಗವಹಿಸಿದ್ದರು.
ಯಾಳ್ಪಿ ವಲಿಭಾಷ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಪದಗ್ರಹಣ ಸಮಾರಂಭವನ್ನುದ್ದೇಶಿಸಿ ಮಾತನಾಡುತ್ತಾ ಪತ್ರಿಕೋದ್ಯಮವು ಕೇವಲ ವೃತ್ತಿಯಲ್ಲ, ಜನರ ನಂಬಿಕೆಯ ಹೊಣೆಗಾ-ರಿಕೆಯೆಂದು ಹೇಳಿದರು. “ಪತ್ರಕರ್ತರು ಸಮಾಜದ ನಿಜವಾದ ಧ್ವನಿ. ಸರ್ಕಾರದ ಯೋಜನೆಗಳು ಜನ-ರಿಗೆ ತಲುಪುವಂತೆ ಹಾಗೂ ಜನರ ಸಮಸ್ಯೆಗಳು ಆಡಳಿತವರ್ಗಕ್ಕೆ ತಲುಪುವಂತೆ ಮಾಡಿ ಸರ್ಕಾರ ಮತ್ತು ಜನರ ನಡುವೆ ಸೇತುವೆಯಂತೆ ಕೆಲಸ ಮಾಡುವುದು | ನಮ್ಮ ಕರ್ತವ್ಯ. ಬಳ್ಳಾರಿ ಜಿಲ್ಲೆಯ ಪತ್ರಿಕಾ ವಲಯವನ್ನು ಮತ್ತಷ್ಟು ಬಲಪಡಿಸುವುದು ಮತ್ತು ಯುವ ಪತ್ರಕರ್ತ ರಿಗೆ ಮಾರ್ಗದರ್ಶನ ನೀಡುವುದು ನಮ್ಮ ಮುಂದಿನ ಕಾರ್ಯಯೋಜನೆ,” ಎಂದು ಅವರು ತಿಳಿಸಿದರು. ಸಂಘದ ಏಕತೆ, ನಿಷ್ಠೆ ಮತ್ತು ನೀತಿಪರ ಪತ್ರಿಕೋದ್ಯಮದ ಅಗತ್ಯವನ್ನು ಅವರು ವಿಶೇಷವಾಗಿ ಒತ್ತಿಹೇಳಿದರು. ನಂತರ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದಕ್ಕೆ ಎಲ್ಲರಿಗೂ ಅಭಿನಂದನೆಗಳು ಸಲ್ಲಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




