ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಹಳೆವಿದ್ಯಾರ್ಥಿ ಸಂಘ ‘ವಿನಮಿತ'ವು 1996 ರ ಬ್ಯಾಚ್‌ನ ಪದವಿಗೆ 25ವರ್ಷ ಕಳೆದ ಸಂಭ್ರಮವನ್ನು ಹಾಗೂ ಹಳೆವಿದ್ಯಾರ್ಥಿಗಳ ಸಮಾವೇಶವನ್ನು ಡಿ.20 ರಂದು ನಿಟ್ಟೆಯಲ್ಲಿ ಹಮ್ಮಿಕೊಂಡಿದೆ. ಈ ಹಳೆವಿದ್ಯಾರ್ಥಿ ಸಮಾವೇಶದಲ್ಲಿ ವಿಶ್ವದಾದ್ಯಂತ ಹರಡಿರುವ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಹಳೆವಿದ್ಯಾರ್ಥಿಗಳು ಉತ್ತಮ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|ನಿರಂಜನ್ ಎನ್ ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


