ಉಜಿರೆ: 2025-26 ನೇ ಸಾಲಿನ ಸೈನ್ಸ್ ಒಲಂಪಿಯಾಡ್ ಫೌಂಡೇಶನ್ ನಡೆಸಿದಂತಹ ಇಂಟರ್ನ್ಯಾಷನಲ್ ಕಾಮರ್ಸ್ ಒಲಂಪಿಯಾಡ್ ಪರೀಕ್ಷೆಯಲ್ಲಿ 7 ವಿದ್ಯಾರ್ಥಿಗಳು ಹಾಗೂ ಇಂಗ್ಲೀಷ್ ಒಲಂಪಿಯಾಡ್ ಪರೀಕ್ಷೆಯಲ್ಲಿ 25 ವಿದ್ಯಾರ್ಥಿಗಳು, ಹಾಗೂ ನ್ಯಾಷನಲ್ ಸೈನ್ಸ್ ಒಲಂಪಿಯಾಡ್ ಪರೀಕ್ಷೆಯಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಇಬ್ಬರು ವಿದ್ಯಾರ್ಥಿಗಳು ಎರಡನೇ ಹಂತದ ಇಂಟರ್ನ್ಯಾಷನಲ್ ಇಂಗ್ಲಿಷ್ ಒಲಂಪಿಯಾಡ್ ಪರೀಕ್ಷೆಗೆ ಅರ್ಹತೆಯನ್ನು ಪಡೆದಿರುತ್ತಾರೆ.
ಈ ಪರೀಕ್ಷೆಗಳನ್ನು ಕಾಲೇಜಿನ ಎಸ್ ಒ ಎಫ್ ನ ಸಂಯೋಜಕರಾದ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಸೌಮ್ಯ ಕೆ ಪಿ, ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ಸುಪ್ರೀತಾ ಪಡಿವಾಳ್, ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಪ್ರಭಾವತಿ ನಡೆಸಿದ್ದರು.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ, ಹಾಗೂ ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


