ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಅನುದಾನಿತ ವಿದ್ಯಾದಾಯನೀ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯು ಹಿಂದು ವಿದ್ಯಾದಾಯಿನೀ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಶಾಲಾ ಸಂಚಾಲಕರಾದ ಸುಧಾಕರರಾವ್ ಪೇಜಾವರ್ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದ ಭಾಸ್ಕರ ರಾವ್ ಬಾಳ, ಮಾಲಕರು ರಾವ್ ಬ್ರದರ್ಸ್ ಸುರತ್ಕಲ್ ಇವರು ಗಣರಾಜ್ಯೋತ್ಸವದ ಸಂದೇಶ ನೀಡಿದರು. ಮುಖ್ಯ ಅತಿಥಿಗಳಾಗಿ ಡಾ.ಕೆ ರಮಾಕಾಂತ ಹೆಬ್ಬಾರ್ ಮತ್ತು ಅವರ ಧರ್ಮಪತ್ನಿ ಡಾ. ಸರೋಜಾ ಹೆಬ್ಬಾರ್ ಇವರು ವಿದ್ಯಾರ್ಥಿಗಳಿಗೆ ಶಾಲಾ ಚಟುವಟಿಕೆಯೊಂದಿಗೆ ದೇಶ ಸೇವೆಯ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪ್ರೇರೇಪಿಸಿದರು.
ಈ ಕಾರ್ಯಕ್ರಮದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಅತ್ಯುತ್ತಮ ನಿರ್ಗಮನ ವಿದ್ಯಾರ್ಥಿ ಪ್ರಶಸ್ತಿಯನ್ನು ಹತ್ತನೇ ತರಗತಿ ಎ ವಿಭಾಗದ ಭುವನಾಭಿರಾಮ ಪೇಜತ್ತಾಯ ಇವರಿಗೆ ನೀಡಿ ಸನ್ಮಾನಿಸಲಾಯಿತು. ಕನ್ನಡ ಮಾಧ್ಯಮದಲ್ಲಿ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಯನ್ನು ಹತ್ತನೇ ತರಗತಿ ಬಿ ವಿಭಾಗದ ಪ್ರಿಯಾಂಕ ಇವರಿಗೆ, ಇವರಿಗೆ ನೀಡಿ ಗೌರವಿಸಲಾಯಿತು.
ಡಾ. ರಮಾಕಾಂತ ಹೆಬ್ಬಾರ್ ಹಾಗೂ ಡಾ. ಸರೋಜಾ ಹೆಬ್ಬಾರ್ ರವರು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸುಮಾರು 9 ವಿದ್ಯಾರ್ಥಿಗಳಿಗೆ ನಗದು ನೀಡಿ ಗೌರವಿಸಲಾಯಿತು. ಮುಖ್ಯ ಶಿಕ್ಷಕರಾದ ದೇವಪ್ಪ ವಸಂತ ಕುಮಾರ್ ನಾಯ್ಕ ಎಲ್ಲರನ್ನು ಸ್ವಾಗತಿಸಿದರು.
ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಶ್ರೀಲಕ್ಷ್ಮೀ ಹಾಗೂ ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿನಯ ಆಚಾರ್ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದಿವಸ್ಪತಿ ನಿರೂಪಿಸಿದರು. ಶ್ರೀಮತಿ ರೇವತಿ ಬಿ ಧನ್ಯವಾದಗೈದರು. ಎಲ್ಲಾ ಶಿಕ್ಷಕ-ಶಿಕ್ಷಕೇತರರು, ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

