ಶ್ರೀ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Upayuktha
0


ಕುಳಾಯಿ: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಅನುದಾನಿತ ಶ್ರೀ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ ಮೈರ್ಪಾಡಿ ಕುಳಾಯಿ ಇಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜರೋಹಣ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಗಂಗಾಧರ ಬಂಜನ್ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.


ನಂತರ ನಡೆದ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕಿ ಶ್ರೀಮತಿ ಕೆ. ಕಲಾವತಿ ವಹಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ವಿಶೇಷವಾಗಿ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ರಕ್ಷಕ-ಶಿಕ್ಷಕ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕುಳಾಯಿ, ಹಳೆ ವಿದ್ಯಾರ್ಥಿ ಪವನ್ ಮೈರ್ಪಾಡಿ, ಭರತೇಶ್ ಇವರು ಪ್ರೊಜೆಕ್ಟರ್ ಮೂಲಕ ರಸ್ತೆ ನಿಯಮ, ಚಿಹ್ನೆಗಳು, ಸುರಕ್ಷಾ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲ್.ವಿ ಸ್ವಾಗತಿಸಿ, ಗಣರಾಜ್ಯೋತ್ಸವದ ಸಂದೇಶ ಸಾರಿದರು.


ಸಹಶಿಕ್ಷಕ ಮದಪ್ಪ ಮಾದರ ಸಂವಿಧಾನ, ಹಕ್ಕು ಕರ್ತವ್ಯ ಬಗ್ಗೆ ಉಪನ್ಯಾಸ ನೀಡಿದರು. ಮಕ್ಕಳಿಂದ ಭಾಷಣ, ದೇಶಭಕ್ತಿ ಗೀತೆಗಳ ಕಾರ್ಯಕ್ರಮ ನಡೆಯಿತು. ಸಹಶಿಕ್ಷಕ ಮಲಕಪ್ಪರವರು ಧನ್ಯವಾದಗೈದರು. ಸಹಶಿಕ್ಷಕ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top