ಕೆ.ಆರ್. ಪೇಟೆ: ಡಾ. ಶಿವಕುಮಾರ ಮಹಾಸ್ವಾಮೀಜಿ ಅವರ 7ನೇ ವರ್ಷದ ಪುಣ್ಯ ಸ್ಮರಣೆ

Upayuktha
0


ಕೆ.ಆರ್.ಪೇಟೆ: ತಾಲ್ಲೂಕು ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ. ಶಿವಕುಮಾರ ಮಹಾಸ್ವಾಮೀಜಿ ಅವರ 7ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. 


ಶಾಸಕರಾದ ಹೆಚ್.ಟಿ. ಮಂಜು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿದ್ದಗಂಗಾ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. 


ನಂತರ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕರು ಮಾತನಾಡಿ ಸಿದ್ದಗಂಗಾ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ, ಕರ್ನಾಟಕ ರತ್ನ ಡಾ. ಶಿವಕುಮಾರ ಸ್ವಾಮೀಜಿ ಯವರು ಅನ್ನ, ಅಕ್ಷರ, ಆರೋಗ್ಯ ಸೇವೆಗಳನ್ನು ನೀಡುವ ಮೂಲಕ ಲಕ್ಷಾಂತರ ಮಂದಿಯ ಜೀವನಕ್ಕೆ ದಾರಿದೀಪವಾಗಿದ್ದಾರೆ.


ತಮ್ಮ ಸಿದ್ದಗಂಗಾ ಮಠದಲ್ಲಿ ಓದುವ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳು ಹಾಗೂ ಸದ್ಗುಣಗಳನ್ನು ಕಲಿಸುವ ಮೂಲಕ ಉತ್ತಮ ಸಂಸ್ಕಾರ  ಕಲಿಸಿಕೊಟ್ಟಿದ್ದಾರೆ. ಇಂತಹ ಅಪರೂಪದ ವ್ಯಕ್ತಿತ್ವವನ್ನು ಹೊಂದಿದ್ದ ಸಿದ್ದಗಂಗಾ ಶ್ರೀಗಳಿಗೆ ಭಾರತ ಸರ್ಕಾರವು ಭಾರತ ರತ್ನ ಪ್ರಶಸ್ತಿ ನೀಡಿದರೆ ಪ್ರಶಸ್ತಿಯ ಮೌಲ್ಯವೇ ಹೆಚ್ವಾಗುತ್ತದೆ ಎಂದು ಅಭಿಪ್ರಾಯಪಟ್ಟ ಶಾಸಕ ಹೆಚ್.ಟಿ. ಮಂಜು ಅವರು 111 ವರ್ಷಗಳ ಸಾರ್ಥಕ ಬದುಕು ನಡೆಸಿದ ಸಿದ್ದಗಂಗಾ ಶ್ರೀಗಳ ತತ್ವಾ ಆದರ್ಶ ಗುಣಗಳನ್ನು ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಿಸಬಹುದಾಗಿದೆ. ಕೆ.ಆರ್.ಪೇಟೆ ಪಟ್ಟಣದ ಪ್ರಮುಖ ವೃತ್ತದಲ್ಲಿ ಡಾ. ಶಿವಕುಮಾರಸ್ವಾಮೀಜಿಯವರ ಪುತ್ಥಳಿಯನ್ನು ಸ್ಥಾಪಿಸಲು ಪುರಸಭೆಯ ಆಡಳಿತಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.


ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸುಜೇಂದ್ರಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಪನಹಳ್ಳಿ ಗವೀಮಠ ಶ್ರೀಗಳಾದ  ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. 


ಈ ಸಂದರ್ಭದಲ್ಲಿ ತಾಲ್ಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಸುಜೇಂದ್ರಕುಮಾರ್, ಕಾಪನಹಳ್ಳಿ ಗವೀಮಠ ಶ್ರೀಗಳಾದ ಸ್ವತಂತ್ರ ಚನ್ನವೀರಯ್ಯ  ಸ್ವಾಮೀಜಿ, ಮುಖಂಡರಾದ ಬ್ಯಾಂಕ್ ಪರಮೇಶ್, ತೋಟಪ್ಪಶೆಟ್ಟಿ, ಬಸವಲಿಂಗಪ್ಪ, ವಕೀಲ ಪುರ ಮಂಜುನಾಥ್, ಬಸವನಹಳ್ಳಿ ಪ್ರತಾಪ್,  ಮೋದೂರು ಮಂಜುನಾಥ್, ಎಂ.ಎಸ್. ಶಿವಮೂರ್ತಿ, ಪ್ರಕಾಶ್, ತಾಲ್ಲೂಕು  ಆರ್.ಟಿ.ಓ.ಮಲ್ಲಿಕಾರ್ಜುನ್ ಅಭಿಮಾನಿಗಳ ಬಳಗದ ಅಧ್ಯಕ್ಷ ಗಂಜಿಗೆರೆ ಮಹೇಶ್, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಎಲ್.ಐ.ಸಿ.ಶಿವಪ್ಪ, ನಾಡಬೋಗನಹಳ್ಳಿ ಎಂ.ಎಸ್. ಈರಪ್ಪ (ದಿನೇಶ್), ಕೆ.ಎಸ್.ಗಂಗಾಧರ್, ಸೋಮನಾಥಪುರ ಚಂದ್ರಶೇಖರ್, ತಾಲ್ಲೂಕು  ಮಹಾಸಭಾ ಪ್ರಧಾನ ಕಾರ್ಯದರ್ಶಿ ಸಿ.ಎನ್.ಅಪ್ಪಾಜಿ, ಉಪಾಧ್ಯಕ್ಷ ಚೋಕನಹಳ್ಳಿ ಪ್ರಕಾಶ್, ಜಗದಾಂಬ, ಖಜಾಂಚಿ ವಸಂತಪ್ಪ, ನಿರ್ದೇಶಕರಾದ ಡಿ.ಸಿ.ಕುಮಾರ್,  ರಾಜಶೇಖರ್, ವೈ.ಸಿ.ಕುಮಾರ್, ಪವಿತ್ರ, ಆಶಾರಾಣಿ, ಪೂರ್ಣಿಮ, ಮಹಾಪೋಷಕರಾದ ಹರೀಶ್, ಅಚ್ಯುತ್, ಭುವನೇಶ್ ಮತ್ತಿತರರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top