ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಮಂಗಳೂರು ಪೊಲೀಸರು ಕೈಗೊಂಡಿರುವ ಕಟ್ಟುನಿಟ್ಟಿನ ಹಾಗೂ ನಿರಂತರ ಕಾರ್ಯಾಚರಣೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಶ್ಲಾಘಿಸಿದೆ.
ಕಳೆದ ಹಲವು ವರ್ಷಗಳಿಂದ ವಿದ್ಯಾನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಂಗಳೂರು ನಗರವು ಮಾದಕ ವಸ್ತುಗಳ ಸಮಸ್ಯೆಯಿಂದ ತೀವ್ರವಾಗಿ ಬಳಲುತ್ತಿತ್ತು. ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳ ಅಕ್ರಮ ವಹಿವಾಟು ನಡೆಯುತ್ತಿದ್ದು, ವಿದ್ಯಾಭ್ಯಾಸದ ಹಂತದಲ್ಲಿರುವ ಅನೇಕ ವಿದ್ಯಾರ್ಥಿಗಳು ವ್ಯಸನದ ದಾರಿಗೆ ತಳ್ಳಲ್ಪಡುವ ಸ್ಥಿತಿ ನಿರ್ಮಾಣವಾಗಿತ್ತು.
ಈ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮಂಗಳೂರು ಪೊಲೀಸರು ಮಾದಕ ವಸ್ತುಗಳ ವಿರುದ್ಧ ದಿಟ್ಟ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಸಂಬಂಧಿತ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಜೊತೆಗೆ, ವಿವಿಧ ಕಾಲೇಜುಗಳಲ್ಲಿ ಅನಿರೀಕ್ಷಿತವಾಗಿ ಮಾದಕ ವಸ್ತು ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಎಚ್ಚರಿಕೆ ಹಾಗೂ ಜಾಗೃತಿ ಮೂಡಿಸಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಸಮಾಜದ ಸ್ವಾಸ್ಥ್ಯ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಕೈಗೊಂಡಿರುವ ಈ ಕ್ರಮಗಳು ಅತ್ಯಂತ ಅಗತ್ಯವಾಗಿದ್ದು, ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿವೆ ಎಂದು ಎಬಿವಿಪಿ ಮಹಾನಗರ ಕಾರ್ಯದರ್ಶಿ ಕು. ಶ್ರೀಲಕ್ಷ್ಮೀ ಕಾಪಿಕಾಡ್ ತಿಳಿಸಿದ್ದಾರೆ.
ಮಾದಕ ವಸ್ತುಗಳ ವಿರುದ್ಧ ನಡೆಯುತ್ತಿರುವ ಪೊಲೀಸರ ಹೋರಾಟಕ್ಕೆ ಎಬಿವಿಪಿಯು ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

