ಹಕ್ಕುಗಳ ಜೊತೆಗೆ ಕರ್ತವ್ಯವೂ ಅಗತ್ಯ: ಯು.ಕೆ. ಖಾಲಿದ್

Upayuktha
0


ಮಂಗಳೂರು: ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಕಲ್ಯಾಣ ಪರಿಷತ್ತಿನ ಆಶ್ರಯದಲ್ಲಿ ಭಾರತದ 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. "ಸ್ವಾಮಲಂಬನೆಯ ಮಂತ್ರ- ವಂದೇ ಮಾತರಂ ಸಮೃದ್ಧಿಯ ಮಂತ್ರ ಆತ್ಮ ನಿರ್ಭಯ ಭಾರತ" ಎಂಬ ವಿಷಯ ದಡಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


ವಾಣಿಜ್ಯ ವಿಭಾಗದ ಉಪನ್ಯಾಸಕಿ ಕು.ಸುದೀಕ್ಷ ಸುಮಧುರ ಕಂಠದಿಂದ ಪ್ರಾರ್ಥನೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಬಳಿಕ ರಾಷ್ಟ್ರ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿರುವ ಎಸ್ ಸಿ ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳು ಯು.ಕೆ ಖಾಲಿದ್ ರಾಷ್ಟ್ರಧ್ವಜದ ಧ್ವಜಾರೋಹಣವನ್ನು ನೆರವೇರಿಸಿ ಮಾತಾಡಿದ ಅವರು ಭಾರತದ ಸಂವಿಧಾನವು ಪ್ರಜಾಪ್ರಭುತ್ವದ ಆಧಾರ ಸ್ತಂಭವಾಗಿದ್ದು ಪ್ರತಿಯೊಬ್ಬ ನಾಗರಿಕನಿಗೂ ಹಕ್ಕುಗಳ ಜೊತೆಗೆ ಕರ್ತವ್ಯವನ್ನು ನೆನಪಿಸುವ ಮಹತ್ವದ ದಾಖಲೆ ಎಂದರು. ಸಂವಿಧಾನದ ಮೌಲ್ಯಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.


ಕಾಲೇಜಿನ ಪ್ರಾಂಶುಪಾಲರಾದ ಹಾರ್ದಿಕ್. ಪಿ. ಚೌಹನ್ ಅವರು ಭಾರತೀಯ ಸಂವಿಧಾನದ ಪ್ರಸ್ತಾವನೆಯನ್ನು ತಿಳಿಸಿದರು. ನೆರೆದ ಎಲ್ಲರಿಗೂ ರಾಷ್ಟ್ರಭಕ್ತಿಯ ಪ್ರತಿಜ್ಞೆಯನ್ನು ಬೋಧಿಸಿದರು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ದೇಶಭಕ್ತಿ ಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು ,ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಕಲ್ಯಾಣ ಪರಿಷತ್ತಿನ ಅಧ್ಯಕ್ಷ ಸುದೀಪ್ ರೈ ತೃತೀಯ ಬಿ.ಕಾಂ ಸ್ವಾಗತಿಸಿದರು. ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿ ಭೂಷಣ್ ವಂದಿಸಿದರು. ವಿದ್ಯಾರ್ಥಿ ಕಲ್ಯಾಣ ಪರಿಷತ್ತಿನ ಉಪಾಧ್ಯಕ್ಷೆ  ಜಾಯ್ಲಿನ್ ರೇವೆನಾ ಪಿಂಟೊ ತೃತೀಯ ಬಿ.ಎಸ್ಸಿ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top