ಸಾಗರ ಹವ್ಯಕ ಆತ್ಮಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ವಾರ್ಷಿಕೋತ್ಸವ

Upayuktha
0

 



ಸಾಗರ: ಹವ್ಯಕ ಆತ್ಮಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ, ಸಾಗರ ವತಿಯಿಂದ 2025–26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದಿನಾಂಕ 10-01-2026 ರಂದು ಬೆಳಿಗ್ಗೆ 10.30ಕ್ಕೆ ಅಜಿತ್ ಸಭಾಭವನದಲ್ಲಿ (ಸೇವಾಸಾಗರ ಶಾಲಾ ಆವರಣ) ಆಯೋಜಿಸಲಾಗಿತ್ತು.


ಕಾರ್ಯಕ್ರಮವನ್ನು ಕ.ರಾ.ಬ್ರಾ. ಅಭಿವೃದ್ಧಿ ನಿಗಮ, ಶಿವಮೊಗ್ಗದ ನಿರ್ದೇಶಕ ಮಾಲತೇಶ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹವ್ಯಕ ಅತ್ಯಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ, ಸಾಗರದ ಅಧ್ಯಕ್ಷರಾದ ಶ್ರೀಮತಿ ಗಿರಿಜಾ ರಾಮಚಂದ್ರ ಅವರು ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ನಗರಸಭೆ ಸಾಗರದ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಮೈತ್ರಿ ಪಾಟೀಲ್ ಹಾಗೂ ಹಿರಿಯ ಲೆಕ್ಕಪರಿಶೋಧಕ ಬಿ.ವಿ. ರವೀಂದ್ರನಾಥ್ ಅವರು ಭಾಗವಹಿಸಿ ಮಾತನಾಡಿದರು. ನಮ್ ಸಮಾಚಾರ ಪತ್ರಿಕೆಯ ಪ್ರಧಾನ ಸಂಪಾದಕ ಮಾ.ಸ. ನಂಜುಂಡಸ್ವಾಮಿ ಅವರು ಅಭಿನಂದನಾ ಮಾತುಗಳನ್ನಾಡಿದರು.


ಈ ಸಂದರ್ಭದಲ್ಲಿ ಶ್ರೀಮತಿ ರೇಷ್ಮಾ ರಘುಪತಿ, ಸಾಗರ, ಕೆ.ಎಸ್. ಪ್ರಕಾಶ್ (ಬ್ರಾಹ್ಮಣ ಕಲಸೆ) ಹಾಗೂ ಶ್ರೀಮತಿ ವೀಣಾ ಪಿ. ಕುಮಾರ್, ಸಾಗರ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯ ಗಣ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top