ವಿವೇಕಾನಂದ ಫಾರ್ಮಾಸ್ಯೂಟಿಕಲ್ ಸೈನ್ಸಸ್ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ
ಪುತ್ತೂರು: ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯೂಟಿಕಲ್ ಸೈನ್ಸಸ್ ಸಂಸ್ಥೆಯಲ್ಲಿ 2025–26ನೇ ಸಾಲಿನ ವಾರ್ಷಿಕ ಕ್ರೀಡೋತ್ಸವವು ಶುಕ್ರವಾರ ಕಾಲೇಜು ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮುರಳಿಧರ ಕೆ. ಅವರು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಅಕಾಡೆಮಿಕ್ ಸಾಧನೆಯ ಜೊತೆಗೆ ಕ್ರೀಡಾ ಮನೋಭಾವವನ್ನೂ ಬೆಳೆಸಿಕೊಳ್ಳಬೇಕು. ಕ್ರೀಡಾ ಶಿಸ್ತು, ತಂಡಭಾವನೆ, ಆತ್ಮವಿಶ್ವಾಸವನ್ನು ವೃದ್ಧಿಸಿ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಖಜಾಂಚಿಯಾದ ಶ್ರೀ ಮೂಲಚಂದ್ರ ಕೆ. ಅವರು ಮಾತನಾಡಿ, ಭಾರತೀಯ ಸಂಪ್ರದಾಯಿಕ ಕ್ರೀಡೆಗಳ ಮಹತ್ವವನ್ನು ವಿವರಿಸಿದರು. ಇಂದಿನ ಯುವ ಪೀಳಿಗೆ ನಮ್ಮ ದೇಶದ ಪಾರಂಪರಿಕ ಕ್ರೀಡೆಗಳತ್ತ ಗಮನಹರಿಸಬೇಕಾದ ಅಗತ್ಯವಿದೆ ಎಂದರು. ಇದೇ ಸಂದರ್ಭದಲ್ಲಿ ಪ್ಯಾರಾ ಆರ್ಚರಿಯಲ್ಲಿ ವಿಶ್ವಮಟ್ಟದಲ್ಲಿ ಸಾಧನೆ ಮಾಡಿದ ಶೀತಲ್ ದೇವಿ ಅವರ ಸಾಧನೆಯನ್ನು ಸ್ಮರಿಸಿ, ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಮುರಳಿಧರ ಕೆ. ಅವರು ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಕಿರಣ್ ಎಸ್.ಎನ್. ಅವರಿಗೆ ಕ್ರೀಡಾ ಜ್ಯೋತಿಯನ್ನು ಹಸ್ತಾಂತರಿಸಿದರು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಕಾಲೇಜಿನ ಕ್ರೀಡಾಪಟು ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ಗೌತಮಿ ಬಿ. ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ಅಂಗವಾಗಿ ಪಥ ಸಂಚಲನದಲ್ಲಿ ವಿಜೇತರಾದ ದ್ವಿತೀಯ ಬಿ.ಫಾರ್ಮ್ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ನಂತರ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯುವ ಮೂಲಕ ಕಾರ್ಯಕ್ರಮಕ್ಕೆ ಹೆಚ್ಚಿನ ಉತ್ಸಾಹ ತುಂಬಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ.ಪಿ. ಅವರು ಸ್ವಾಗತಿಸಿ, ಕಾಲೇಜಿನ ಉಪನ್ಯಾಸಕರು ಹಾಗೂ ಕ್ರೀಡಾ ಸಂಯೋಜಕರಾದ ಶಾಂತನು ಕಾಮತ್ ಅವರು ವಂದಿಸಿದರು. ದ್ವಿತೀಯ ಬಿ.ಫಾರ್ಮ್ ವಿದ್ಯಾರ್ಥಿನಿಯಾದ ರಕ್ಷಿತಾ ಬಿ. ಹಾಗೂ ವಿಭಾ ಎನ್.ಎನ್. ಅವರು ಕಾರ್ಯಕ್ರಮ ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


