ಬಂಗಾಡಿ ರವಿರಾಜ ಬಳ್ಳಾಲ್ ನಿಧನ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha
0

 


ಧರ್ಮಸ್ಥಳ: ಬಂಗಾಡಿಯ ಪ್ರಮುಖರೂ, ಹಿರಿಯ ಕೃಷಿಕರೂ ಆದ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ರವಿರಾಜ ಬಳ್ಳಾಲ್ ಅವರ ನಿಧನದಿಂದ ಸಮಾಜವು ಒಬ್ಬ ಧರ್ಮನಿಷ್ಠ ಹಾಗೂ ಸಾಹಿತ್ಯಾಭಿಮಾನಿ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ ಎಂದು ಹೆಗ್ಗಡೆಯವರು ಸ್ಮರಿಸಿದ್ದಾರೆ. ರವಿರಾಜ ಬಳ್ಳಾಲ್ ಅವರು ಬಂಗಾಡಿ ಬಸದಿಯನ್ನು ಅತಿಶಯಕ್ಷೇತ್ರವಾಗಿ ಅಭಿವೃದ್ಧಿಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸದಾ ಸ್ವಾಧ್ಯಾಯದಲ್ಲಿ ತೊಡಗುತ್ತಿದ್ದ ಅವರು ಧರ್ಮ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು ಎಂದು ಅವರು ತಿಳಿಸಿದ್ದಾರೆ.


ಬಂಗಾಡಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಧರ್ಮ ಪ್ರಭಾವನಾ ಕಾರ್ಯಕ್ರಮಗಳು ಹಾಗೂ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದಲ್ಲಿ ಅವರಿಗಿದ್ದ ಅನುಭವವನ್ನು ಹೆಗ್ಗಡೆಯವರು ಈ ಸಂದರ್ಭದಲ್ಲಿ ನೆನಪಿಸಿಕೊಂಡರು. ಶ್ರೀಕ್ಷೇತ್ರ ಧರ್ಮಸ್ಥಳದ ಪರಮ ಭಕ್ತರಾಗಿದ್ದ ರವಿರಾಜ ಬಳ್ಳಾಲ್ ಅವರು ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಅಲ್ಲದೆ, ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆಯ ಕುರಿತು ಅವರು ರಚಿಸಿರುವ ಅಮೂಲ್ಯ ಕೃತಿಯು ಅವರ ಭಕ್ತಿಗೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ.


ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಡಾ. ವೀರೇಂದ್ರ ಹೆಗ್ಗಡೆಯವರು ಪ್ರಾರ್ಥಿಸಿದ್ದಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top