ಬೆಳ್ಳೂರು: ಸಾಹಿತ್ಯ-ಗಾನ ನೃತ್ಯ ಕಾರ್ಯಕ್ರಮ

Upayuktha
0



ಕಾಸರಗೋಡು: ಶ್ರೀ ಅಯ್ಯಪ್ಪ ಸೇವಾ ಸಂಘ, ಬೆಳ್ಳೂರಿನ 48ನೇ ವಾರ್ಷಿಕ ಮಂಡಲೋತ್ಸವದ ಅಂಗವಾಗಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ), ಕಾಸರಗೋಡು ವತಿಯಿಂದ 147ನೇ ಸಾಹಿತ್ಯ–ಗಾನ–ನೃತ್ಯ ವೈಭವ ಕಾರ್ಯಕ್ರಮವು ಅತ್ಯಂತ ವೈಭವದಿಂದ ನಡೆಯಿತು.


ಸಂಸ್ಥೆಯ ಕಲಾವಿದರಿಂದ ವೈವಿಧ್ಯಮಯ ಹಾಗೂ ಆಕರ್ಷಕ ನೃತ್ಯ ಪ್ರದರ್ಶನಗಳು ನಡೆಯಿದ್ದು, ರಿಂಗ್ ಡಾನ್ಸ್ ಮತ್ತು ಯೋಗ ನೃತ್ಯವು ಪ್ರೇಕ್ಷಕರ ಗಮನ ಸೆಳೆಯಿತು. ಮಕ್ಕಳಿಂದ ಹಿರಿಯರ ವರೆಗೆ ನಡೆದ ನೃತ್ಯ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.


ಕಾರ್ಯಕ್ರಮದ ಅಂತ್ಯದಲ್ಲಿ ಸಂಸ್ಥೆಯ ಅಧ್ಯಕ್ಷರನ್ನು ದೇವಾಲಯದ ವತಿಯಿಂದ ಶಾಲು, ಸ್ಮರಣಿಕೆ, ಫಲ–ಪುಷ್ಪ ಹಾಗೂ ದೇವರ ಪ್ರಸಾದ ನೀಡಿ ಗೌರವಿಸಲಾಯಿತು. ಭಾಗವಹಿಸಿದ ಎಲ್ಲಾ ಕಲಾವಿದರನ್ನು ದೇವರ ಸನ್ನಿಧಿಯಲ್ಲಿ ಗೌರವಧನ ನೀಡಿ ಪುರಸ್ಕರಿಸಲಾಯಿತು.


ಈ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಭಕ್ತರು ಹಾಗೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top